whatsapp facebooktwitter

ದಾವಣಗೆರೆ;ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನದ ಪ್ರಯುಕ್ತ ಏರ್ಪಡಿಸಿದ್ದ ಎಂಜಿನಿಯರ್‍ಗಳ ದಿನಾಚರಣೆ

ದಾವಣಗೆರೆ;ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನದ ಪ್ರಯುಕ್ತ ಏರ್ಪಡಿಸಿದ್ದ ಎಂಜಿನಿಯರ್‍ಗಳ ದಿನಾಚರಣೆ

15-09-2020 06:31 PM

ದಾವಣಗೆರೆ ಸೆ.15 -ವಿಶ್ವವಿದ್ಯಾನಿಲಯ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಮಾತನಾಡಿ, ನಿಸ್ವಾರ್ಥ ಸೇವೆಯಿಂದ ದೇಶದ ಉನ್ನತಿ ಸಾಧ್ಯ ಅರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಸರ್ ಎಂ.ವಿಶ್ವೇಶ್ವರಯ್ಯ ಅವರು ನೀಡಿದ ಕೊಡುಗೆಗಳು ಶಾಶ್ವತವಾಗಿ ಉಳಿದಿವೆ. ಪ್ರತಿಯೊಬ್ಬ ವ್ಯಕ್ತಿಯೂ ನಿಸ್ವಾರ್ಥದಿಂದ ದೇಶಕ್ಕಾಗಿ, ಸಮಾಜಕ್ಕಾಗಿ ತನ್ನ ಸೇವೆಯನ್ನು ಸಮರ್ಪಿಸಿದಾಗ ದೇಶವನ್ನು ಅತ್ಯುನ್ನತ ಮಟ್ಟಕ್ಕೆ ಒಯ್ಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಜೀವನದಲ್ಲಿ ಶಿಸ್ತು, ಕಾರ್ಯದಲ್ಲಿ ಸಂಯಮ, ಅಭಿವೃದ್ದಿಯ ಮುಂದಾಲೋಚನೆ, ಯೋಜನೆಗಳ ಅನುಷ್ಠಾನಕ್ಕೆ ಅಧ್ಯಯನಗಳ ಜೊತೆಗೆ ಜನಪರ ಕಾಳಜಿಯ ಸೇವಾಭಾವಗಳನ್ನು ಮೈಗೂಡಿಸಿಕೊಂಡಾಗ ಕೈಗೊಂಡ ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಲು ಸಾಧ್ಯ. ವಿಶ್ವೇಶ್ವರಯ್ಯ ಅವರ ಪ್ರಾಮಾಣಿಕವಾದ ಕಾರ್ಯ, ಸೇವಾ ನಿಷ್ಠೆ ಹಾಗೂ ಯೋಜನಾಬದ್ಧ ಕಾರ್ಯಗಳು ಇಂದಿಗೂ ಜನಮಾನಸದಲ್ಲಿ ಗಟ್ಟಿಯಾಗಿ ಉಳಿಯಲು ಕಾರಣವಾಗಿವೆ ಎಂದು ತಿಳಿಸಿದರು.

ಯಾವುದೇ ಕೆಲಸ ಮಾಡುವ ಮುನ್ನ ಅಧ್ಯಯನ, ಚಿಂತನ-ಮಂಥನ ಅಗತ್ಯ. ನಾವು ತಿಳಿಸುವ ವಿಚಾರಗಳು ಇನ್ನೊಬ್ಬರ ಮೇಲೆ ಕೆಟ್ಟ ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸಬೇಕು. ಶಿಕ್ಷಕರೂ ಸಹ ತಮ್ಮ ಪಾಠ ಪ್ರವಚನಕ್ಕೆ ಮುನ್ನ ಉದ್ದೇಶಿತ ವಿಷಯದ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ವಿದ್ಯಾರ್ಥಿಗಳಿಗೆ ಮಾಹಿತಿ

Advertise

ನೀಡಬೇಕು. ಆಗ ಸಿಗುವ ತೃಪ್ತಿಗೆ ಸರಿಸಮವಾದುದು ಯಾವುದೂ ಇಲ್ಲ ಎಂದು ಹೇಳಿದರು.
ಕುಲಸಚಿವ ಪ್ರೊ. ಬಸವರಾಜ ಬಣಕಾರ, ಸರ್.ಎಂ. ವಿಶ್ವೇಶ್ವರಯ್ಯ ಅವರು ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರ. ಬ್ಯಾಂಕ್, ವಿಶ್ವವಿದ್ಯಾನಿಲಯ, ಮಹಿಳಾ ಶಿಕ್ಷಣ, ಕೈಗಾರಿಕೆ, ನೀರಾವರಿ, ಅಣೆಕಟ್ಟು, ಆಡಳಿತ ನಿರ್ವಹಣೆ, ವಿದ್ಯುತ್ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ತಮ್ಮದೇಯಾದ ವಿಭಿನ್ನ ರೀತಿಯ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಯತ್ನಿಸಿದ್ದಾರೆ. ಅವರ ಅನುಪಮವಾದ ಸೇವೆ, ಯೋಜನೆಗಳು ಇಂದಿಗೂ ಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿವೆ ಎಂದು ನುಡಿದರು.

ಭದ್ರಾವತಿಯ ಕಾಗದ ಕಾರ್ಖಾನೆ, ಕಬ್ಬಿಣ ಉಕ್ಕು ಕಾರ್ಖಾನೆ, ಮೈಸೂರು ವಿವಿ, ಮೈಸೂರು ಬ್ಯಾಂಕ್, ಸಕ್ಕರೆ ಕಾರ್ಖಾನೆ, ಶರಾವತಿ ಜಲ ವಿದ್ಯುತ್, ನಗರಾಭಿವೃದ್ಧಿ, ಬಣ್ಣ ಮತ್ತು ಅರಗು ಕಾರ್ಖಾನೆ, ಸೋಪ್, ಮೈಸೂರು ರೇಷ್ಮೆ,… ಹೀಗೆ ಅವರು ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ಕ್ಷೇತ್ರವನ್ನೂ ಬಿಟ್ಟಿಲ್ಲ. ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಅಭಿವೃದ್ಧಿ ಪಡಿಸಿ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಬೆಳೆಸಲು ನೆರವಾಗಿದ್ದಾರೆ ಎಂದು ವಿವರಿಸಿದರು.

ಪರೀಕ್ಷಾಂಗ ಕುಲಸಚಿವೆ ಪ್ರೊ. ಅನಿತಾ ಎಚ್.ಎಸ್., ಹಣಕಾಸು ಅಧಿಕಾರಿ ಪ್ರೊ. ಗೋಪಾಲ ಎಂ. ಅಡವಿರಾವ್, ಡೀನ್ ಡಾ.ಕೆ. ವಿಶ್ವನಾಥ, ಡಾ. ರಾಜಕುಮಾರ, ಚಿತ್ರದುರ್ಗ ಸ್ನಾತಕೋತ್ತರ ಕೇಂದ್ರದ ಸಂಯೋಜನಾಧಿಕಾರಿ ಡಾ. ವಿಶ್ವನಾಥ, ಕುಮಾರ ಸಿದ್ಧಮಲ್ಲಪ್ಪ ಇದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos