whatsapp facebooktwitter

ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಶಾಮನೂರು ಶಿವಶಂಕರಪ್ಪ

ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಶಾಮನೂರು ಶಿವಶಂಕರಪ್ಪ

15-09-2020 06:43 PM

ದಾವಣಗೆರೆ ಸೆ.15 -ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳವಾರ ಎ.ಬಿ.ಡಿ ಏರಿಯಾದ ಎಸ್.ಎಸ್.ಎಂ ನಗರ, ಬಿಡಿ ಲೇಔಟ್, ಪಾರ್ವತಮ್ಮ ನಗರಗಳಲ್ಲಿ ರೂ. 10 ಕೋಟಿ ವೆಚ್ಚದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಸಿಸಿ ಚರಂಡಿ, ಕವರಿಂಗ್ ಸ್ಲ್ಯಾಬ್ ಹಾಗೂ ಸಿಸಿ ರಸ್ತೆ ನಿರ್ಮಾಣ ಸೇರಿಂದಂತೆ ಮೂಲ ಸೌಕರ್ಯ ಅಭಿವೃದ್ಧಿಗಳ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಉತ್ತಮ ರೀತಿಯಲ್ಲಿ ಗುತ್ತಿಗೆದಾರರು ಕೆಲಸ ನಿರ್ವಹಿಸಿ ಆದಷ್ಟು ಬೇಗ ಜನರಿಗೆ ಒದಗಿಸಬೇಕು ಎಂದರು.

ಸಿಜಿ

Advertise

ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲ ಎಂಬ ದೂರು ಕೇಳಿಬಂದಿದೆ. ಈಗಾಗಲೇ ಆಸ್ಪತ್ರೆಯಲ್ಲಿ 30 ವೆಂಟಿಲೇಟರ್‍ಗಳಿವೆ. ಆದರೆ ಆಪರೇಟರ್ ಮಾಡುವವರಿಲ್ಲ. ಕೂಡಲೇ ನೇಮಕ ಮಾಡಿಕೊಂಡು ಸಾರ್ವಜನಿಕರ ಚಿಕಿತ್ಸೆಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಮಹಾನಗರಪಾಲಿಕೆ ಮೇಯರ್ ಬಿ.ಜಿ.ಅಜಯ ಕುಮಾರ್ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಡಿಯ ಕೆಲಸಗಳು ವಿಳಂಬವಾಗುತ್ತಿವೆ ಎಂಬ ಮಾತು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಸಭೆ ಮಾಡಲಾಗಿದೆ. ಆದಷ್ಟು ಬೇಗ ಕೆಲಸ ಮಾಡಲು ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ಕಾಮಗಾರಿ ಮುಗಿಸಲಾಗುವುದು. ಈಗಾಗಲೇ ಶೇ. 60 ರಷ್ಟು ಕೆಲಸವಾಗಿವೆ ಎಂದು ತಿಳಿಸಿದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos