whatsapp facebooktwitter

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ಎಲ್ಲಾ ಸಿದ್ಧತೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ಎಲ್ಲಾ ಸಿದ್ಧತೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

15-09-2020 06:55 PM

ಶಿವಮೊಗ್ಗ, ಸೆ.15 . ಇದೇ 21ರಿಂದ ಆರಂಭವಾಗಲಿರುವ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಯಾವುದೇ ಅಡಚಣೆಯಿಲ್ಲದಂತೆ ಸುಸೂತ್ರವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.

ಅವರು ಮಂಗಳವಾರ ಜಿಲ್ಲಾಡಳಿತ ಸಭಾಂಗಣದಲ್ಲಿ ಪೂರಕ ಪರೀಕ್ಷೆ ಆಯೋಜನೆ ಸಿದ್ಧತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು.

ಜಿಲ್ಲೆಯಲ್ಲಿ 5225ವಿದ್ಯಾರ್ಥಿಗಳು ಒಟ್ಟು 17ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಎರಡು ಪರೀಕ್ಷಾ ಕೇಂದ್ರಗಳನ್ನು ಮೀಸಲಿರಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗದ ಅಭ್ಯರ್ಥಿಗಳನ್ನು ಹೊಸ ಅಭ್ಯರ್ಥಿಗಳಾಗಿ ಪರಿಗಣಿಸಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕ್ರಮ ಕೈಗೊಳ್ಳುವುದರ ಜತೆಗೆ ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂದರ್ಭದಲ್ಲಿ ಕೈಗೊಳ್ಳಲಾಗಿದ್ದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪೂರಕ ಪರೀಕ್ಷೆ ಸಂದರ್ಭದಲ್ಲಿಯೂ ಕೈಗೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರಸ್ತುತ ಕರೋನಾ

Advertise

ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಿಸುವ ಪೂರ್ವದಲ್ಲಿ ಸ್ಯಾನಿಟೈಸರ್, ದೇಹದ ಉಷ್ಣತೆ ಪರೀಕ್ಷೆ ಕೈಗೊಳ್ಳಬೇಕು. ವಿದ್ಯಾಥಿಗಳು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವುದನ್ನು ಖಾತ್ರಿಪಡಿಸಬೇಕು. ವಿದ್ಯಾರ್ಥಿಗಳು ಗುಂಪುಗೂಡಲು ಅವಕಾಶ ನೀಡಬಾರದು ಎಂದು ಅವರು ತಿಳಿಸಿದರು.

ಕರೋನಾ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಇದಕ್ಕಾಗಿ ಸೂಕ್ತ ಸೆಂಟರ್‍ಗಳನ್ನು ಗುರುತಿಸಿ ಎಲ್ಲಾ ವ್ಯವಸ್ಥೆ ಕಲ್ಪಿಸಬೇಕು. ಮಾಸ್ಕ್‍ಗಳು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಲಭ್ಯವಿರಬೇಕು. ಪರೀಕ್ಷೆ ಆರಂಭಕ್ಕೆ ಮೊದಲ ದಿನ ಎಲ್ಲಾ ಪರೀಕ್ಷಾ ಕೇಂದ್ರಗಳ ಸ್ಯಾನಿಟೈಸೇಶನ್ ಮಾಡಬೇಕು. ಶೇ.100ರಷ್ಟು ಸುರಕ್ಷಿತವಾಗಿ ಪರೀಕ್ಷೆಯನ್ನು ನಡೆಸಲು ಕ್ರಮಗಳನ್ನು ಕೈಗೊಂಡು ಯಾವುದೇ ಬೇಜವಾಬ್ದಾರಿಗೆ ಆಸ್ಪದ ನೀಡಬಾರದು ಎಂದು ಅವರು ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಡಿಡಿಪಿಐ ರಮೇಶ್, ಸುಮಂಗಲಾ ಕುಚಿನಾಡ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos