whatsapp facebooktwitter

ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹಕ್ಕೆ ಬಿ.ಎ.ಹರೀಶ್ ಚಾಲನೆ

ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹಕ್ಕೆ ಬಿ.ಎ.ಹರೀಶ್ ಚಾಲನೆ

15-09-2020 07:04 PM

ಮಡಿಕೇರಿ ಸೆ.15-ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹಕ್ಕೆ ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಮಂಗಳವಾರ ಚಾಲನೆ ನೀಡಿದರು.
ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀಪ ಬೆಳಗಿ ಚಾಲನೆ ನೀಡಿ ಬಳಿಕ ಮಾತನಾಡಿದ ಜಿ.ಪಂ. ಅಧ್ಯಕ್ಷರು ಜಿಲ್ಲೆಯಲ್ಲಿ 1.20 ಲಕ್ಷದಷ್ಟು ಅನಕ್ಷರಸ್ಥರಿದ್ದು, ಅನಕ್ಷರಸ್ಥರಿಗೆ ಅಕ್ಷರ ಕಲಿಸುವಂತಾಗಬೇಕು ಎಂದು ಅವರು ಹೇಳಿದರು.
ಹಿಂದೆ ಸಾಕ್ಷರತಾ ಆಂದೋಲನ ಮಾದರಿಯಲ್ಲಿ ಅಕ್ಷರ ಕಲಿಸಲಾಗುತ್ತಿತ್ತು. ಅನಕ್ಷರಸ್ಥರಿಗೆ ಅಕ್ಷರ ಕಲಿಸುವ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ನಡೆಯಬೇಕಿದೆ ಎಂದು ಬಿ.ಎ.ಹರೀಶ್ ಅವರು ತಿಳಿಸಿದರು.
ಅನಕ್ಷರಸ್ಥರನ್ನು ಹುಡುಕಿ ಅಕ್ಷರಸ್ಥರನ್ನಾಗಿ ಮಾಡುವ ಕೆಲಸವಾಗಬೇಕು. ಈ ಕಾರ್ಯಕ್ರಮದಲ್ಲಿ ಎಲ್ಲರೂ ಕೈಜೋಡಿಸಿಬೇಕಿದೆ ಎಂದು ಜಿ.ಪಂ.ಅಧ್ಯಕ್ಷರು ಮನವಿ ಮಾಡಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಮಾತನಾಡಿ ಉದ್ಯೋಗದ ಜೊತೆಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಶಿಕ್ಷಣ ಅತ್ಯವಶ್ಯ. ಆದ್ದರಿಂದ ಗ್ರಾ.ಪಂ.ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ ಕೆಲಸವಾಗಬೇಕು ಎಂದು ಅವರು ಹೇಳಿದರು.
ಜಿ.ಪಂ.ಮುಖ್ಯ ಯೋಜನಾಧಿಕಾರಿ ಶ್ರೀಕಂಠಮೂರ್ತಿ ಅವರು ಮಾತನಾಡಿ ಆಧುನಿಕ ಜಗತ್ತಿನಲ್ಲಿ ಶಿಕ್ಷಣ ಇಲ್ಲದ ಬದುಕು ಊಹಿಸುವುದು ಕಷ್ಟಸಾಧ್ಯವಾಗಿದೆ. ಆದ್ದರಿಂದ

Advertise

ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಅಕ್ಷರ ಜ್ಞಾನ ಇದ್ದಲ್ಲಿ ಬದುಕು ಉಜ್ವಲವಾಗಿರುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ಬಿ.ಬಿ.ಪುಷ್ಪಾವತಿ ಅವರು ಮಾತನಾಡಿ ಜಿಲ್ಲೆಯಲ್ಲಿ ಶೇ.20 ರಷ್ಟು ಅನಕ್ಷರಸ್ಥರು ಇದ್ದು, ಇವರಿಗೆ ಅಕ್ಷರ ಜ್ಞಾನ ನೀಡಬೇಕು. ವಲಸೆ ಕಾರ್ಮಿಕರು, ಮುಖ್ಯವಾಹಿನಿಯಿಂದ ದೂರ ಇರುವವರಿಗೆ ಶಿಕ್ಷಣ ನೀಡಬೇಕಿದೆ ಎಂದರು.
ಜಿಲ್ಲಾ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಅವರು ಮಾತನಾಡಿ ರಾಷ್ಟ್ರದ ಅಭಿವೃದ್ಧಿ ಶಿಕ್ಷಣವನ್ನು ಅವಲಂಭಿಸಿದೆ. ಆದ್ದರಿಂದ ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಬೇಕಿದೆ ಎಂದರು.
ಸಾಹು ಮಹಾರಾಜ, ಸಾವಿತ್ರಿ ಬಾಪುಲೆ ಅವರು 1800 ವರ್ಷದಲ್ಲಿಯೇ ಶಿಕ್ಷಣಕ್ಕೆ ಒತ್ತು ನೀಡಿದ್ದರು. ಮಹಿಳೆಯರಿಗೆ ಶಾಲೆ ತೆರೆದಿದ್ದರು ಎಂದು ಅವರು ಸ್ಮರಿಸಿದರು.
ಇಂದಿಗೂ ಸಹ ಗ್ರಾಮೀಣ ಮತ್ತು ನಗರ ಪ್ರದೇಶದ ಸಾಕ್ಷರತೆ ಪ್ರಮಾಣ ವ್ಯತ್ಯಾಸವಿದ್ದು, ಇದನ್ನು ಸರಿಪಡಿಸುವ ಕೆಲಸವಾಗಬೇಕು ಎಂದು ಅವರು ಹೇಳಿದರು.

ಜಿ.ಪಂ.ಮುಖ್ಯ ಯೋಜನಾಧಿಕಾರಿ ಶ್ರೀಕಂಠಮೂರ್ತಿ ಅವರು ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹ ಕಾರ್ಯಕ್ರಮದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮೋಹನ್ ಇತರರು ಇದ್ದರು. ಮೋಹನ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos