whatsapp facebooktwitter

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯದೆ ಇರುವುದು ವಿಷಾಧನೀಯ : ಎಂದು ಶಾಸಕ ಮಹಾದೇವಪ್ಪ ಯಾದವಾಡ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯದೆ ಇರುವುದು ವಿಷಾಧನೀಯ : ಎಂದು ಶಾಸಕ ಮಹಾದೇವಪ್ಪ ಯಾದವಾಡ

15-09-2020 08:28 PM

ರಾಮದುರ್ಗ: ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದರೂ ಸಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ0ತೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯದೆ ಇರುವುದು ವಿಷಾಧನೀಯ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ಮಂಗಳವಾರ ಪಟ್ಟಣದ ನೇತಾಜಿ ಸುಭಾಸಚಂದ್ರಭೋಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ೨೦೧೯-೨೦ನೇ ಸಾಲಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕ ಕಲ್ಯಾಣ ನಿಧಿಯಲ್ಲಿ ಉಚಿತ ಕಲಿಕೋಪಕರಣ ವಿತರಣೆ ಮಾಡಿ ಮಾತನಾಡಿದ ಅವರು, ನೆರೆ ಸಂತ್ರಸ್ತರ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದು ಎಂದು ಸರ್ಕಾರ ಉಚಿತವಾಗಿ ನೀಡುತ್ತದೆ. ವಿದ್ಯಾರ್ಥಿಗಳು ಇದರು ಪ್ರಯೋಜನ ಪಡೆದು ಉತ್ತಮ ಶಿಕ್ಷಣ ಪಡೆಯಬೇಕೆಂದು

Advertise

ಹೇಳಿದರು.
ತಾಲೂಕಿನ ಕೆಲ ಶಾಲೆಗಳಲ್ಲಿ ಶಿಕ್ಷಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸರಿಯಾಗಿ ಉಸ್ತುವಾರಿ ಮಾಡಿ ತಾಲೂಕಿನ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಕ್ಷೇತ್ರ ಶಿಕ್ಷಾಧಿಕಾರಿ ಎಮ್ ಆರ್ ಅಲಾಸಿ ಪ್ರಾಸ್ತಾವಿಕವಾಗಿ ಮಾತನಾಡಿ ಶಿಕ್ಷಕರು ಸಮಯ ಪ್ರಜ್ಞೆಯಿಂದ ಕೆಲಸ ಮಾಡ ಸರ್ಕಾರದ ಯೋಜನೆಗಳನ್ನು ಮಕ್ಕಳಿಗೆ ಮುಟ್ಟಿಸುವ ಕೆಲಸ ಮಾಡಿದರೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಸಾಧ್ಯವೆಂದು ಹೇಳಿದರು.
ದೈಹಿಕ ಶಿಕ್ಷಣಾಧಿಕಾರಿ ಪಿ. ಖ. ಕಾಲವಾಡ, ಮುಖೋಪಾದ್ಯಾಯರಾದ ಎಸ್. ಆರ್. ಕಂಟಿಕರ, ಎಮ್. ಪಿ. ರಡ್ಡೇರ, ಎಮ್. ಡಿ. ಮಂಕಾದಾರ, ವಾಯ್. ವಿ. ಮಳಲಿ ಹಾಗೂ ಶಿಕ್ಷಣ ಸಂಯೋಜಕ ಅನಂತಜೋಷಿ , ಶಿಕ್ಷಕ ಶೇಖ ನಿರೂಪಿಸಿದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos