whatsapp facebooktwitter

ಪರಿಶಿಷ್ಟರ ಕಲ್ಯಾಣಕ್ಕಾಗಿ ನೀಡಿದ ಅನುದಾನ ಸದ್ಭಳಕೆ ಆಗಲಿ : ಜಿಲ್ಲಾಧಿಕಾರಿ ಎಂ.ಸು0ದರೇಶ್ ಬಾಬು

ಪರಿಶಿಷ್ಟರ ಕಲ್ಯಾಣಕ್ಕಾಗಿ ನೀಡಿದ ಅನುದಾನ ಸದ್ಭಳಕೆ ಆಗಲಿ : ಜಿಲ್ಲಾಧಿಕಾರಿ ಎಂ.ಸು0ದರೇಶ್ ಬಾಬು

15-09-2020 08:37 PM

ಗದಗ ಸೆ.15 : `ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ದೌರ್ಜನ್ಯಗಳು ನಡೆಯದಂತೆ ನಿಯಂತ್ರಿಸಬೇಕು. ಸರ್ಕಾರ ಪರಿಶಿಷ್ಟರ ಕಲ್ಯಾಣಕ್ಕಾಗಿ ನೀಡಿರುವ ಅನುದಾನ ಸದ್ಭಳಕೆ ಆಗಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸು0ದರೇಶ್‌ಬಾಬು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗದ ದೌರ್ಜನ್ಯ ನಿಯಂತ್ರಣ ಜಾಗೃತ ಸಮಿತಿ, ಎಸ್‌ಸಿಪಿ/ಟಿಎಸ್‌ಪಿ ಪ್ರಗತಿ ಪರಿಶೀಲನೆ ಹಾಗೂ ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಕಾö್ಯವೆಂರ‍್ಸ್ಗಳ ತ್ರೆಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯದಂತಹ ಪ್ರಕರಣಗಳು ವರದಿಯಾಗದಂತೆ ಕ್ರಮ ಕೈಗೊಳ್ಳಬೇಕು. ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ಥರಿಗೆ ಸರ್ಕಾರದ ಸೌಲಭ್ಯ ಮತ್ತು ಆರ್ಥಿಕ ಪರಿಹಾರ ಒದಗಿಸಬೇಕು. ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಸಮುದಾಯ ಭವನಗಳ ನವೀಕರಣ, ಪರಿಶಿಷ್ಟರ, ಮ್ಯಾನ್ಯುಯಲ್ ಸ್ಕಾö್ಯವೆಂರ‍್ಸ್ ಹಾಗೂ ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ಧಿಗಾಗಿ ಶೇ.24.10ರಷ್ಟು ಮೀಸಲು ಅನುದಾನವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ರೋಣ ತಾಲೂಕಿನ ಯಾವಗಲ್ ಮಾಳವಾಡ ಗ್ರಾಮದಲ್ಲಿ ಸ್ಮಶಾನ ಭೂಮಿಗಾಗಿ ನಿವೇಶನ ಲಭ್ಯವಿದ್ದು, ಮುಗಳಿ ಗ್ರಾಮದಲ್ಲಿ ರುದ್ರಭೂಮಿಗಾಗಿ ಖಾಸಗಿಯವರಿಂದ ಖರೀದಿಸುವ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹಂತ ಹಂತವಾಗಿ ವ್ಯಕ್ತಿಗತ ಚಟುವಟಿಕೆ ಹಾಗೂ ಸಮುದಾಯ ಆಧಾರಿತ ಕಾಮಗಾರಿಗಳಿಗಾಗಿ ಬಿಡುಗಡೆ ಆಗುವ ಹಾಗೂ ಬಾಕಿ ಉಳಿದಿರುವ ಅನುದಾನವನ್ನು ಮಾರ್ಚ್ ತಿಂಗಳೊಳಗೆ ಖರ್ಚು ಮಾಡಬೇಕು. ಅನುದಾನ ಬಿಡುಗಡೆ ಆಗಿದ್ದಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ, ಟೆಂಡರ್

Advertise

ಪ್ರಕ್ರಿಯೆ ಪೂರ್ಣಗೊಳಿಸಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ನಿಗದಿ ಪಡಿಸಿರುವ ಗುರಿ ಸಾಧಿಸಬೇಕು.

ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಬೇಕು. ಸರ್ಕಾರದ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸುವ ಸನ್ ಬೋರ್ಡ್ಗಳನ್ನು ಅಳವಡಿಸಲು ಕ್ರಮ ವಹಿಸಬೇಕು. ಸ್ವಚ್ಚತಾ ಸಿಬ್ಬಂದಿಗಳಿಗೆ ಅವಶ್ಯವಿರುವ ಸುರಕ್ಷತಾ ಪರಿಕರಗಳನ್ನು ವಿತರಿಸಬೇಕು. ಜಿಲ್ಲೆಯಲ್ಲಿ ಶೌಚಾಲಯ, ಒಳಚರಂಡಿ ಹಾಗೂ ತೆರೆÀದ ಗುಂಡಿಗಳು ಸೇರಿದಂತೆ ಯಾವುದೇ ಅನೈರ್ಮಲ್ಯ ಸ್ಥಳಗಳಲ್ಲಿ ಮ್ಯಾನ್ಯುಯಲ್ ಸ್ಕಾö್ಯವೆಂಜಿAಗ್ ಜರುಗದಂತೆ ನೋಡಿಕೊಳ್ಳಬೇಕು. ಬದಲಾಗಿ ಯಂತ್ರೋಪಕರಣಗಳನ್ನು ಬಳಸುವಂತೆ ಜಿಲ್ಲಾಧಿಕಾರಿ ಎಂ.ಸುAದರೇಶ್ ಬಾಬು ಸೂಚಿಸಿದರು.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ಜಾತಿ ನಿಂದನೆ ಹಾಗೂ ಅತ್ಯಾಚಾರ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿದ್ದು, ಒಟ್ಟು 13 ದೋಷಾರೋಪಣ ಪಟ್ಟಿ ಸಲ್ಲಿಸಿರುವ ಪ್ರಕರಣಗಳಿವೆ. ಒಟ್ಟು 17 ಜನ ಸಂತ್ರಸ್ತರಿಗೆ 7.75 ಲಕ್ಷ ರೂ. ಪರಿಹಾರ ಧನ ನೀಡಲಾಗಿದೆ. ಸಫಾಯಿ ಕರ್ಮಚಾರಿಗಳಿಗೆ ಮನೆ ನಿರ್ಮಿಸಲು ಗೃಹಭಾಗ್ಯ ಯೋಜನೆಯಡಿ 7.50 ಲಕ್ಷ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 1.50 ಲಕ್ಷ, ರಾಜೀವ್‌ಗಾಂಧಿ ವಸತಿ ಯೋಜನೆಯಡಿ 1.80 ಲಕ್ಷ ಸಹಾಯಧನ ನೀಡಲಾಗುತ್ತಿದೆ. ನಿವೇಶನ ಖರೀದಿಗಾಗಿ 2.50 ಲಕ್ಷ ಹಾಗೂ ಶೇ.24.10ರ ಅನುದಾನದಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುತ್ತಿದೆ. ಪೌರಕಾರ್ಮಿಕರು ಹಾಗೂ ಅವರ ಅವಲಂಭಿತರಿಗೆ ವೈದ್ಯಕೀಯ ತಪಾಸಣೆಗಾಗಿ 1.40 ಲಕ್ಷ ರೂ., ಕುಡಿಯುವ ನೀರಿನ ಸಂಪರ್ಕಕ್ಕಾಗಿ 4 ಲಕ್ಷ ರೂ. ಸೇರಿ ಒಟ್ಟು 6.80 ಲಕ್ಷ ರೂ. ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ನಗರಸಭೆ ಯೋಜನಾಧಿಕಾರಿ ಎಸ್.ಎನ್.ರುದ್ರೇಶ್, ತಹಸೀಲ್ದಾರರು, ತಾಲೂಕು ಪಂಚಾಯತಿ ಇಒಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸೇರಿದಂತೆ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸದಸ್ಯರು ಸಭೆಯಲ್ಲಿ ಇದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos