whatsapp facebooktwitter

ಬೆಲ್ಲ, ಅರಿಶಿಣ ಉದ್ಯಮ ತರಬೇತಿ: ಅರ್ಜಿ ಆಹ್ವಾನ

ಬೆಲ್ಲ, ಅರಿಶಿಣ ಉದ್ಯಮ ತರಬೇತಿ: ಅರ್ಜಿ ಆಹ್ವಾನ

16-09-2020 12:23 PM

ಬೆಳಗಾವಿ, ಸೆ.16 : ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾ ಕೈಗಾರಿಕೆ ಕೇಂದ್ರ ಬೆಳಗಾವಿ, ಹಾಗೂ ಕರ್ನಾಟಕ ಉದ್ಯಮಶೀಲತಾಭಿದ್ಧಿ ಕೇಂದ್ರ (ಸಿಡಾಕ್), ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬೆಲ್ಲ ಮತ್ತು ಅರಿಶಿಣ (Jaggery and Turmeric) ಉತ್ಪನ್ನಗಳ ತಯಾರಿಕಾ ಕುರಿತು ಆರು ದಿನಗಳ ಉದ್ಯಮಶೀಲತಾಭಿದ್ಧಿ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.
ಸದರಿ ಉತ್ಪನ್ನಗಳ ತಯಾರಿಕೆ ಕುರಿತು ಉದ್ಯಮ ಪ್ರಾರಂಭಿಸುವವರಿಗಾಗಿ ಈ ತರಬೇತಿಯಲ್ಲಿ ಬೆಲ್ಲ ಮತ್ತು ಅರಿಶಿಣ ಉತ್ಪನ್ನಗಳಲ್ಲಿ ಇರುವ ಅವಕಾಶಗಳು, ಉದ್ಯಮ ಸ್ಥಾಪನೆಯಲ್ಲಿ ಅನುಸರಿಸಬೇಕಾದ ಕ್ರಮಗಳು, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಉದ್ಯಮ ನಿರ್ವಹಣಾ ವಿಷಯಗಳಲ್ಲಿ ಪರಿಣಿತರಿಂದ ಮಾರ್ಗದರ್ಶನ ನೀಡಲಾಗುವುದು.

Advertise

ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ನಿಗದಿತ ನಮೂನೆಯಲ್ಲಿ ದಿನಾಂಕ 24.09.2020 ರೊಳಗಾಗಿ ಸಲ್ಲಿಸಬೇಕು.ಕನಿಷ್ಠ 18 ವರ್ಷ ವಯೋಮಾನವನ್ನು ಹೊಂದಿರಬೇಕು. (ಹೆಚ್ಚಿನ ವಿದ್ಯಾಭ್ಯಾಸ ಅನುಭವ ಉಳ್ಳವರಿಗೆ ಆದ್ಯತೆ ನೀಡಲಾಗುವುದು). ತರಬೇತಿ ಶುಲ್ಕ : ರೂ.1000/- ಮೊತ್ತದ ಡಿ.ಡಿ. ಅಥವಾ ಚೆಕ್ ಅನ್ನು ಅರ್ಜಿಯೊಂದಿಗೆ Joint Director CEDOK, Belagavi ಇವರಿಗೆ ಸಂದಾಯವಾಗುವಂತೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್ ಜಿಲ್ಲಾ ಕೈಗಾರಿಕಾ ಕೇಂದ್ರದ ಮೊದಲನೇಯ ಮಹಡಿ,
ಖಾನಾಪೂರ ರಸ್ತೆ, ಉದ್ಯಮಬಾಗ ಬೆಳಗಾವಿ ಇಲ್ಲಿಗೆ ನೇರವಾಗಿ ಭೇಟಿಯಾಗಿ ಹೆಸರನ್ನು ದಿನಾಂಕ: 24.09.2020 ರೊಳಗೆ ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಯನ್ನು- 9591366626 ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ 1
By Neelappa Mukkannavar on 2020-09-16 05:56 PM
Hi


Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos