ಬೆಳಗಾವಿ: ಶಿಕ್ಷಣ ಕ್ರಾಂತಿಗೆ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿಯೆ ಸರಕಾರಿ ಶಾಲೆಗಳು ಹಿಂದುಳಿದಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಇನ್ನು ಬೆಳಗಾವಿ ಜಿಲ್ಲೆಯಲ್ಲಂತು ಸರಕಾರಿ ಶಾಲೆಗಳ ಸ್ಥಿತಿ ಅದೋಗತಿ ತಲುಪಿದೆ ಆಮ್ ಆದ್ಮಿ ಜಿಲ್ಲಾಧ್ಯಕ್ಷ ವಿಜಯ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.
ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಸುದ್ಧಿಗೋಷ್ಟಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿರುವ ಸರಕಾರಿ ಶಾಲೆಗಳ ಸ್ಥಿತಿಗತಿಯ ಬಗ್ಗೆ ವಿಡಿಯೋ ಮತ್ತು ಫೋಟೋ ಪ್ರದರ್ಶನ ಮಾಡಿ ಅವರು ಮಾತನಾಡಿದರು. ಗುರುಕುಲ ಪದ್ದತಿಯ ಕಾಲದಿಂದಲೂ ಕರ್ನಾಟಕವು ಶಿಕ್ಷಣ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದು ಶಿಕಷಣ ಕ್ರಾಂತಿಯಲ್ಲಿ ಮುಂಚೂಣಿಯಲ್ಲಿದೆ ಆದರೆ ಸರಕಾರಿ ಶಾಲೆಗಳ ಪ್ರಸ್ತುತ ಸ್ಥಿತಿ ಅದೋಗತಿ ತಲುಪಿದೆ. ದೆಹಲಿಯಂತಹ ರಾಜ್ಯಗಳಲ್ಲಿ ಸರಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಪೈಪೋಟಿ ಮಾಡುವ ಮಟ್ಟದಲ್ಲಿ ಅಭಿವೃದ್ಧಿ ಹೊಂದಿವೆ ಆದರೆ ನಮ್ಮಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿ ಮಾಡದೇ ಇರುವುದು ದುರಾದೃಷ್ಟಕರ ಸಂಗತಿ ಎಂದರು.
ಬೆಳಗಾವಿ ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳು ಮೂಲಭೂತ ಸೌಲಭ್ಯಗಳನ್ನು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿವೆ. ಗುಣಮಟ್ಟದ ಶಿಕ್ಷಕರಿದ್ದರೂ ಕಟ್ಟಗಳ ಕೊರತೆಯಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕಟ್ಟಡಗಳನ್ನು ದುರಸ್ಥಿಗೊಳಿಸಿ, ನಾಲ್ಕನೇ ತರಗತಿಯವರೆಗೆ ಕೆಳಗೆ ಕುಳಿತುಕೊಳ್ಳುವ ವ್ಯವಸ್ಥೆಯನ್ನು ತೆಗೆದು ಹಾಕಿ ಬೆಂಚಗಳ ಸೌಲಭ್ಯ ವದಗಿಸಬೇಕು ಇಲ್ಲದಿದ್ದರೆ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.