This is the title of the web page
This is the title of the web page

Please assign a menu to the primary menu location under menu

State

ಗಣರಾಜ್ಯೋತ್ಸವ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಿ : ವಿಕಾಸ್ ಕಿಶೋರ್ ಸುರಳ್ಕರ್


ಕೊಪ್ಪಳ, ಜ.17 (ಕರ್ನಾಟಕ ವಾರ್ತೆ): ಗಣರಾಜ್ಯೋತ್ಸವ ದಿನಾಚರಣೆಗೆ ಅಗತ್ಯ ವ್ಯವಸ್ಥಿತ ತಯಾರಿ ಮಾಡಿಕೊಂಡು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಸೋಮವಾರ (ಜ.17) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೇಂದ್ರದಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸುವ ಕುರಿತಂತೆ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
73ನೇ ಗಣರಾಜ್ಯೋತ್ಸವದ ದಿನದಂದು ಬೆಳಿಗ್ಗೆ 08 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಹಾಗೂ ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟç ಧ್ವಜಾರೋಹಣ ನಡೆಯಲಿದೆ. ಪ್ರಸ್ತುತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಭಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯವಶ್ಯಕವಾಗಿದ್ದು, ಜನವರಿ 26 ರಂದು ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ ಹಾಗೂ ಗ್ರಾಮ ಪಂಚಾಯತಗಳಲ್ಲಿ ನಡೆಯುವ ಧ್ವಜಾರೋಹಣ/ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಜ. 26 ರಂದು ಬೆಳಗ್ಗೆ 08 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಹಾಗೂ 09 ಗಂಟೆಗೆ ಜಿಲ್ಲಾ ಕ್ರಿಡಾಂಗಣದಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದರು.
ಪಥಸಂಚಲನ ಹಾಗೂ ಗೌರವ ವಂದನೆ ಸ್ವೀಕಾರ ಕಾರ್ಯಕ್ರಮದಲ್ಲಿ ಆಯ್ದ ತಂಡಗಳಿಗೆ ಮಾತ್ರ ಅವಕಾಶವಿದ್ದು, ಪಥಸಂಚಲನದಲ್ಲಿ ಹತ್ತಕ್ಕಿಂತ ಹೆಚ್ಚು ತಂಡಗಳು ಪಾಲ್ಗೊಳ್ಳುವಂತಿಲ್ಲ. ಪಥಸಂಚಲನ ತಂಡಗಳಲ್ಲಿ ದೈಹಿಕವಾಗಿ ಸದೃಢವಾಗಿರುವ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ವಹಿಸಬೇಕು. ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಯಾವುದೇ ಅನಾನುಕೂಲವಾಗದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮಗೆ ನಿಯೋಜಿಸಿದ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿಸಬೇಕು. ಕಾರ್ಯಕ್ರಮದ ದಿನದಂದು ಭಾಗವಹಿಸುವ ಸಾರ್ವಜನಿಕರು, ಅತಿಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಆರೋಗ್ಯ ಇಲಾಖೆಯವರು ಥರ್ಮಲ್ ಸ್ಕಾö್ಯನಿಂಗ್, ಸ್ಯಾನಿಟೈಸರ್ ಒದಗಿಸುವುದರ ಜೊತೆಗೆ ತುರ್ತು ಸಂದರ್ಭಕ್ಕಾಗಿ ಅಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ನಗರಸಭೆಯಿಂದ ನಗರದ ಪ್ರಮುಖ ರಸ್ತೆ ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದ ವೇದಿಕೆಯಲ್ಲಿ ಹೂವಿನ ಅಲಂಕಾರವನ್ನು ತೋಟಗಾರಿಕೆ ಇಲಾಖೆಯಿಂದ ನಿರ್ವಹಿಸಬೇಕು. ಹಾಗೂ ಸಂಬAಧಿಸಿದ ಇಲಾಖೆಗಳು ತಮಗೆ ನೀಡಲಾದ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನುಮ್ ಅವರು ಮಾತನಾಡಿ, ಅಮೃತ ಮಹೋತ್ಸವ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ. ಗಣರಾಜ್ಯೋತ್ಸವ ನಿಮಿತ್ತ ವ್ಯವಸ್ಥಿತ ಆಚರಣೆಗೆ ರಚಿಸಿದ ಸಮಿತಿಗಳು ತಮಗೆ ನೀಡಲಾದ ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಅವರು ಮಾತನಾಡಿ, ಗಣರಾಜ್ಯೋತ್ಸವ ಅಂಗವಾಗಿ ತಾಲ್ಲೂಕು ಮಟ್ಟದಲ್ಲಿ ಧ್ವಜ ಸಂಹಿತೆಯನ್ನು ಪಾಲಿಸಿ ವ್ಯವಸ್ಥಿತ ಧ್ವಜಾರೋಹಣ ನೆರವೇರಿಸುವಂತೆ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮವನ್ನು ಶಿಷ್ಟಾಚಾರದಂತೆ ನಡೆಸಬೇಕಾಗಿದ್ದು, ಇಲಾಖೆಗಳು ಯಾವುದೇ ಕಾರ್ಯಕ್ರಮ ಆಯೋಜಿಸುವ ಮುನ್ನ, ಜಿಲ್ಲಾಡಳಿತದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಆದ್ದರಿಂದ ತಮ್ಮ ಇಲಾಖೆಯ ಯೋಜನೆಗಳ ಮಾಹಿತಿಯ ಪುಸ್ತಕ ಬಿಡುಗಡೆ, ಕರ ಪತ್ರ/ ಪೋಸ್ರ‍್ಸ್ ಬಿಡುಗಡೆಯಂತಹ ಇತರೆ ಕಾರ್ಯಕ್ರಮವಿದ್ದರೆ, ಮುಂಚಿತವಾಗಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಇದರಿಂದ ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲಕಾನಂದ ಮಳಗಿ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಕೊಪ್ಪಳ ತಹಶೀಲ್ದಾರ ಅಮರೇಶ ಬಿರಾದರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೆರೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಜಿ ರವಿಕುಮಾರ್, ಪಶು ಇಲಾಖೆ ಉಪನಿರ್ದೇಶಕ ಡಾ. ಹೆಚ್.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Gadi Kannadiga

Leave a Reply