ಕೊಪ್ಪಳ ಮಾರ್ಚ್ 30:- ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ಗೆ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಡೆಯ ಅವರು ಮಾರ್ಚ 30ರಂದು ವಿವಿಧ ಚೆಕ್‌ಪೋಸ್ಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಕೊಪ್ಪಳ ತಾಲೂಕಿನ ಮುನಿರಾಬಾದ್, ಕುಕನೂರ ತಾಲೂಕಿನ ಬನ್ನಿಕೊಪ್ಪ ಚೆಕ್‌ಪೋಸ್ಟ್ಗಳಿ ಭೇಟಿ ನೀಡಿ, ಆಯಾ ಚೆಕ್ ಪೋಸ್ಟಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳು ಸಿಬ್ಬಂದಿಗೆ ನೀಡಲಾದ ಮೂಲಭೂತ ಸೌಕರ್ಯಗಳ ಕುರಿತು ವಿಚಾರಿಸಿದರು. ಅವರ ಕಾರ್ಯವೈಖರಿಯ ಬಗ್ಗೆ ಸಹ ಪರಿಶೀಲಿಸಿದರು.
ಗಂಗಾವತಿ ತಾಲೂಕು ವರದಿ: ಗಂಗಾವತಿ ತಾಲೂಕಿನ ಜಂಗಮರ್ ಕಲ್ಗುಡಿ ಗ್ರಾಮದ ಚೆಕ್‌ಪೋಸ್ಟ್ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತಗೌಡ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಇದೆ ವೇಳೆ ವಾಹನಗಳ ತಪಾಸಣೆ ನಡೆಸಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಪಂ ವಿಷಯ ನಿರ್ವಾಹಕರು, ಚೆಕ್ ಪೋಸ್ಟ್ ಸಿಬ್ಬಂದಿ ಇದ್ದರು..
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ