This is the title of the web page
This is the title of the web page

Please assign a menu to the primary menu location under menu

State

ಮತದಾನ ಜಾಗೃತಿ ಅಭಿಯಾನ


ಗದಗ : ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಮತದಾರರ ಸಾಕ್ಷರತಾ ಸಂಘದ ಮೂಲಕ ಜಿಲ್ಲೆಯ ನಾಗಾವಿ ಹಾಗೂ ಕಳಸಾಪುರ ಗ್ರಾಮ ಪಂಚಾಯಿತಿಗಳ ಸಹಕಾರದೊಂದಿಗೆ ಗ್ರಾಮಗಳಲ್ಲಿ
ಜಾಥಾ ಮೂಲಕ ಮತದಾನದ ಮಹತ್ವ ಕುರಿತು ಸಾರ್ವಜ£ಕರಲ್ಲಿ ಜಾಗೃತಿ ಮೂಡಿಸಲಾಯಿತು.
ಅಭಿಯಾನಕ್ಕೆ ಚಾಲನೆ £Ãಡಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ ವಿಷ್ಣುಕಾಂತ ಚಟಪಲ್ಲಿ ಅವರು ಶೇ.೧೦೦ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳುವಂತಾಗಬೇಕು.ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನು £ರ್ಮಿಸಬೇಕು. ಸುತ್ತ-ಮುತ್ತಲಿನ ಜನರಿಗೂ ಮತದಾನದ ಮಹತ್ವ ತಿಳಿಸಿಕೊಡಬೇಕು’ ಎಂಬ ಉದ್ದೇಶದಿಂದ ಈ ಅಭಿಯಾನವನ್ನು ಕೈಗೊಳ್ಳುಲಾಗಿದೆ ಎಂದರು
ಅಭಿಯಾನವು ಕಳಸಾಪುರ ಗ್ರಾಮದಿಂದ ಆರಂಭವಾಗಿ ನಾಗಾವಿ ಗ್ರಾಮದಲ್ಲಿ ಮುಕ್ತಾಯವಾಯಿತು. ಜಾಗದಲ್ಲಿ ‘£ಮ್ಮ ಮತ £ಮ್ಮ ಹಕ್ಕು, ಜಾಗತ ಮತದಾರ, ಸದೃಢ ಪ್ರಜಾಪ್ರಭುತ್ವ, £ಮ್ಮ ಮತ ಗೌಪ್ಯವಾಗಿರಲಿ, ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ, ನನ್ನ ಮತ ಮಾರಟಕ್ಕಿಲ್ಲ, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ, ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೆ £ರ್ಭೀತಿಯಿಂದ ಮತ ಚಲಾಯಿಸಿ, ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತ ಪಡಿಸಿಕೊಂಡು ಮತದಾನ ಮಾಡಿ’ ಮೇ ೧೦, ಕಡ್ಡಾಯವಾಗಿ ಓಟು ಒತ್ತು, ಎಂಬ ಘೋಷ ವಾಕ್ಯಗಳು ಅಭಿಯಾನದಲ್ಲಿ ಮೊಳಗಿದವು.
ಅಭಿಯಾನದಲ್ಲಿ ಉಪನ್ಯಾಸಕರಾದ ಶ್ರೀ ಪ್ರವೀಣ್ ಅಂಕಲಕೋಟಿ, ಡಾ ಶ್ರೀಧರ ಹಾದಿಮ£, ಡಾ ಸಂತೋಷ, ಡಾ ಸಂಗನಗೌಡ, ಶ್ರೀ £ಂಗಪ್ಪ, ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಶ್ರೀ ಪ್ರಕಾಶ ಮಾಚೇನಹಳ್ಳಿ, ಶ್ರೀ ಅಭಿಷೇಕ್, ಕಲಾ ವಿಭಾಗಳ ವಿದ್ಯಾರ್ಥಿಗಳ ವೃಂದ ಭಾಗಿಯಾಗಿದ್ದರು.


Leave a Reply