This is the title of the web page
This is the title of the web page

Please assign a menu to the primary menu location under menu

State

ದೋಟಿಹಾಳ್ ಗ್ರಾಮದಲ್ಲಿ ಮತದಾನ ಜಾಗೃತಿ


ಕೊಪ್ಪಳ ಮೇ ೦೫ : ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಸುಕುಮುನಿ ದೇವಸ್ಥಾನದ ಆವರಣದಲ್ಲಿ ತಾಲೂಕ ಸ್ವೀಪ್ ಸಮಿತಿ ಹಾಗೂ ಗ್ರಾಮ ಪಂಚಾಯಿತಿಯಿಂದ ಮೇ ೦೫ರಂದು ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರಾದ ಕುಷ್ಟಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹನುಮಂತಗೌಡ ಪೊಲೀಸ್ ಪಾಟೀಲ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿ, ವಿಧಾನಸಭಾ ಚುನಾವಣೆ ೨೦೨೩ರ ಅಂಗವಾಗಿ ಮತದಾರರಿಗೆ ಜಾಗೃತಿ ಮೂಡಿಸಲು ಜಾನಪದ ಹಾಡು ಹಾಗೂ ಬೀದಿ ನಾಟಕ ಮತ್ತು ಪ್ರಮುಖ ಬೀದಿಗಳಲ್ಲಿ ಜಾಥಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಮತದಾನ ಮಾಡಲು ಯಾರು ಸಹ ನಿಷ್ಕಾಳಜಿ ತೋರಬಾರದು. ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾಗಿದೆ. ಎಲ್ಲಾ ಅರ್ಹ ಮತದಾರರು ಮತ್ತು ೧೮ ವರ್ಷ ಮೇಲ್ಪಟ್ಟಂತ ಯುವಕರು ನಿರ್ಭೀತಿಯಿಂದ ಮತ ಚಲಾಯಿಸಬೇಕು. ಯೋಗ್ಯ ಹಾಗೂ ಸಮರ್ಥ ನಾಯಕನನ್ನು ಆಯ್ಕೆ ಮಾಡಬೇಕೆಂದು ಸಲಹೆ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮುತ್ತಣ್ಣ ಅವರು ಮತದಾನ ಜಾಗೃತಿಯ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ತಾಪಂ ಸಿಬ್ಬಂದಿ ರಾಮಣ್ಣ ದಾಸರ್, ಚಂದ್ರಶೇಖರ್ ಹಿರೇಮಠ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸ್ವ ಸಹಾಯ ಸಂಘಗಳ ಸದಸ್ಯರು,ಕಾಯಕ ಬಂಧುಗಳು, ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಶ್ರೀಕಾಂತ್, ಬೀರಪ್ಪ, ಮೂರ್ತುಜಾಸಾಬ್, ಗುರುಬಾಯಿ, ಶರಣಮ್ಮ, ದುರುಗಮ್ಮ ಹಾಗೂ ಗ್ರಾಮದ ಗುರು ಹಿರಿಯರು ಮತ್ತು ಸಾರ್ವಜನಿಕರು ಇದ್ದರು.


Leave a Reply