ಕೊಪ್ಪಳ ಏಪ್ರಿಲ್ ೨೬ : ಕನಕಗಿರಿ ತಾಲೂಕಿನ ಚಿಕ್ಕಡಂಕನಕಲ್ ಗ್ರಾ.ಪಂ ವ್ಯಾಪ್ತಿಯ ಚಿರ್ಚನಗುಡ್ಡಾ ತಾಂಡಾದಲ್ಲಿ ಏಪ್ರಿಲ್ ೨೫ರಂದು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಹಾಗೂ ಅಣಕು ಮತದಾನ ಕಾರ್ಯಕ್ರಮ ನಡೆಯಿತು.
ಈ ವೇಳೆ ತಾಲೂಕು ಸ್ವೀಪ್ ಸಮಿತಿಯ ಸದಸ್ಯರು ಮಾತನಾಡಿ, ೧೮ ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಯಾರು ಮತದಾನದಿಂದ ವಂಚಿತರಾಗಬಾರದು. ಸಾರ್ವಜನಿಕರು ಮೇ.೧೦ ರಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಕಡ್ಡಾಯವಾಗಿ ಮತದಾನ ಮಾಡಬೇಕು ತಿಳಿಸಿದರು. ಬಳಿಕ ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕುರಿತು ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಸ್ವೀಪ್ ಸಮಿತಿ ಸದಸ್ಯರು, ಗ್ರಾ.ಪಂ ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳು ಮತ್ತು ಐಇಸಿ ಸಂಯೋಜಕರು ಹಾಜರಿದ್ದರು.
Gadi Kannadiga > State > ಕನಕಗಿರಿ: ಚಿರ್ಚನಗುಡ್ಡಾ ತಾಂಡಾದಲ್ಲಿ ಮತದಾನ ಜಾಗೃತಿ
ಕನಕಗಿರಿ: ಚಿರ್ಚನಗುಡ್ಡಾ ತಾಂಡಾದಲ್ಲಿ ಮತದಾನ ಜಾಗೃತಿ
Suresh26/04/2023
posted on
More important news
ಪ್ರತಿಬಂಧಕಾಜ್ಞೆ ಜಾರಿ
08/06/2023