This is the title of the web page
This is the title of the web page

Please assign a menu to the primary menu location under menu

State

ಮೇ ೧೦ರಂದು ಮತದಾನ: ೧೨ ಪರ್ಯಾಯ ದಾಖಲೆ


ಕೊಪ್ಪಳ ಏಪ್ರಿಲ್ ೨೪ : ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-೨೦೨೩ರ ಹಿನ್ನೆಲೆಯಲ್ಲಿ ಮೇ ೧೦ರಂದು ಮತದಾನವು ನಡೆಯಲಿದೆ. ಕೊಪ್ಪಳ ಜಿಲ್ಲೆಯಲ್ಲಿ ಶೇ ೧೦೦ರಷ್ಟು ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ವಿತರಿಸಲಾಗಿದ್ದು, ಅದನ್ನೆ ಬಳಸಿ ಮತ ಚಲಾಯಿಸುವುದು. ಅನಿವಾರ್ಯ ಕಾರಣಗಳಿಂದ ಮತದಾರರ ಗುರುತಿನ ಚೀಟಿ ಲಭ್ಯವಾಗದಿದ್ದ ಪಕ್ಷದಲ್ಲಿ ಭಾರತ ಚುನಾವಣಾ ಆಯೋಗವು ಸೂಚಿಸಿದ ೧೨ ಇತರೆ ಪರ್ಯಾಯ ದಾಖಲೆಯ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.
ಪರ್ಯಾಯ ದಾಖಲೆಗಳು: ಆಧಾರ್ ಕಾರ್ಡ್, ನರೇಗಾ ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿಯಿಂದ ವಿತರಿಸಲಾದ ಭಾವಚಿತ್ರಹೊಂದಿರುವ ಪಾಸ್‌ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿಯಲ್ಲಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ವಾಹನ ಚಾಲನಾ ಪರವಾನಗಿ ಪತ್ರ, ಪಾನ್ ಕಾರ್ಡ್, ಎನ್.ಪಿ.ಆರ್ ಅಡಿಯಲ್ಲಿ ಆರ್.ಜಿ.ಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‌ಪೋರ್ಟ್, ಭಾವಚಿತ್ರಹೊಂದಿರುವ ಪಿಂಚಣಿ ದಾಖಲೆ, ಕೇಂದ್ರ/ ರಾಜ್ಯ ಸರ್ಕಾರ/ ಪಿಎಸ್‌ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್‌ಎ ಹಾಗೂ ಎಂಎಲ್ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು ಅಥವಾ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ನೀಡುವ ಯುಡಿಐಡಿ ಕಾರ್ಡ್ ಬಳಸಿ ಮತಚಲಾಯಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.


Leave a Reply