This is the title of the web page
This is the title of the web page

Please assign a menu to the primary menu location under menu

State

ಡಿ. ೩೦ ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್


ಕೊಪ್ಪಳ ಡಿಸೆಂಬರ್ ೨೭ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್‌ವ್ಯೂವನ್ನು ಡಿಸೆಂಬರ್ ೩೦ ರಂದು ಬೆಳಿಗ್ಗೆ ೧೦.೩೦ ರಿಂದ ೨.೩೦ ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ವಾಕ್ ಇನ್ ಇಂಟರ್‌ವ್ಯೂವನ್ನು ಎಸ್.ಬಿ.ಐ ಲೈಫ್ ಇನ್‌ಸರ‍್ಸೆನ್ಸ್ ಕಂಪನಿ ಲಿಮಿಟೆಡ್ ಹೊಸಪೇಟ ಇವರು ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. ಅರ್ಹ ಎಸ್.ಎಸ್.ಎಲ್.ಸಿ., ಪಿ.ಯು.ಸಿ ಅಥವಾ ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಈ ವಾಕ್ ಇನ್ ಇಂಟರ್‌ವ್ಯೂವಲ್ಲಿ ಭಾಗವಹಿಸುವ ಆಸಕ್ತಿಯುಳ್ಳ ೧೮ ರಿಂದ ೩೫ ವರ್ಷದೊಳಗಿನ ನಿರುದ್ಯೋಗಿ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೇಜೂಮ್) ಹಾಗೂ ಪಾಸ್ ಪೋಟೊ ಅಳತೆಯ ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ದೂ.ಸಂ: ೦೮೫೩೯-೨೨೦೮೫೯ ಹಾಗೂ ಮೊ.ಸಂ: ೯೮೮೦೯೭೨೮೨೫, ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply