This is the title of the web page
This is the title of the web page

Please assign a menu to the primary menu location under menu

Local News

ನಮ್ಮಲ್ಲಿ ಒಗ್ಗಟ್ಟಿದೆ ಬಿನ್ನಾಭಿಪ್ರಾಯವಿಲ್ಲ: ಹಣಮಂತ ನಿರಾಣಿ


ಬೆಳಗಾವಿ: ಬಿಜೆಪಿಯಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದು ನಮ್ಮಲ್ಲಿ ಯಾವುದೇ ಭಿನ್ನಾಬಿಪ್ರಾಯವಿಲ್ಲ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ. ಈ ಬಾರಿಯು ಬಿಜೆಪಿ ಹೆಚ್ಚಿನ ಮತಗಳಲ್ಲಿ ಗೆಲ್ಲಲಿದೆ ಎಂದು ವಾಯುವ್ಯ ಪದವೀಧರ ಕ್ಷೇತ್ರ ಚುನಾವಣೆಯ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ಅವರು ಹೇಳಿದ್ದಾರೆ.

ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು ವಾಯುವ್ಯ ಪದವೀಧರ ಕ್ಷೇತ್ರ ಚುನಾವಣೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಈ ಬಾರಿಯು ಬಹುಮತಗಳಿಂದ ಬಿಜೆಪಿ ಗೆಲ್ಲಲಿದ್ದು ,ಇಂದು ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದ್ದೇವೆ ಮೆ.೨೬ರಂದು ಬಿಜೆಪಿ ಮುಂಡರು ಶಾಸಕರು ಮತ್ತು ಸಚಿವರ ನೇತೃತ್ವದಲ್ಲಿ ಮತ್ತೊಮ್ಮೆಮ್ಮ ನಾಮಪತ್ರ ಸಲ್ಲಿಸುತ್ತೇವೆ ಎಂದರು. ಎರಡನೇ ಬಾರಿಗೆ ವಾಯವ್ಯ ಪದವಿದರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಅತಿ ಹೆಚ್ಚು ಮತಗಳಿಂದ ಜಯ ಸಾಧಿಸಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಳೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿಯವರು ಬೆಳಗಾವಿಗೆ ಆಗಮಿಸುತ್ತಿದ್ದು ಪಕ್ಷದ ಸಂಘಟನೆ ಮತ್ತು ಚುನಾವಣೆ ರೂಪರೇಷೆಗಳ ಬಗ್ಗೆ ಸುಧಿರ್ಘ ಸಬೆ ನಡೆಸಲಿದ್ದಾರೆ ಎಂದರು. ನಂತರ ಚುನಾವಣಾ ಕೇಂದ್ರವನ್ನು ಇಲ್ಲಿ ಉದ್ಘಾಟನೆ ಮಾಡಲಿದ್ದೇವೆ ಎಂದರು.

ಪಕ್ಷದಲ್ಲಿರುವ ಬಿನ್ನಮತ ಶಮನ ಮಾಡಲು ಸಭೆ ಕರೆದಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಮ್ಮಲ್ಲಿ ಯಾವುದೇ ಬಿನ್ನಮತವಿಲ್ಲ ಎಲ್ಲರೂ ಒಗ್ಗಟ್ಟಾಗಿದ್ದೇವೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ ಇನ್ನು ಯತ್ನಾಳ ಅವರು ನಮ್ಮ ಪಕ್ಷದ ನಾಯಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ವೈಯಕ್ತಿಕವಾಗಿ ನಮ್ಮಲ್ಲಿ ಬಿನ್ನಾಭಿಪ್ರಾಯಗಳಿದ್ದರೂ ಪಕ್ಷದಲ್ಲಿ ಒಗ್ಗಟ್ಟಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಮತ್ತಿತರರು ಬಾಗಿಯಾಗಿದ್ದರು.


Leave a Reply