This is the title of the web page
This is the title of the web page

Please assign a menu to the primary menu location under menu

State

ಬಿಜೆಪಿಗೆ ಯಾವ ನೈತಿಕ ಹಕ್ಕಿದೆ; ಸಿಎಂ ಸಿದ್ದರಾಮಯ್ಯ


ಮೈಸೂರು, ಆಗಸ್ಟ್ ೨೯; ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದುಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರದ ೧೦೦ ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ೪ ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ತ£ಖೆ ಆರಂಭವಾಗುತ್ತಿವೆ. ತ£ಖೆ ಕೈಗೊಂಡಿರುವ ಬಗ್ಗೆ ಮೊದಲು ಉತ್ತರಿಸಲಿ ಎಂದರು.
*ತ£ಖೆಗೆ ಹಿಂದೆಯೇ ಒತ್ತಾಯ ಮಾಡಿದ್ದೆವು*
ಬಿಜೆಪಿಯವರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ನಾವು ಮೊದಲೇ ಹೇಳಿದ್ದೆವು. ಅಧಿಕಾರಕ್ಕೆ ಬರುವ ಮುನ್ನವೇ ಅವರ ಎಲ್ಲಾ ಹಗರಣಗಳ ಬಗ್ಗೆ ತ£ಖೆ ಮಾಡಿಸುವುದಾಗಿ ಹೇಳಿದ್ದೆವು. ಪಿ.ಎಸ್.ಐ ಹಗರಣವನ್ನು £ವೃತ್ತ ನ್ಯಾ. ಬಿ.ವೀರಪ್ಪ ಅವರು, ೪೦% ಹಗರಣವನ್ನು £ವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ತ£ಖೆ ಮಾಡಲಿದೆ, ಕೋವಿಡ್ ಕಾಲದ ಹಗರಣವನ್ನು £ವೃತ್ತ ನ್ಯಾ. ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ತ£ಖೆ ನಡೆಯುತ್ತಿದೆ. ಇದರಲ್ಲಿ ದ್ವೇಷ ಎಲ್ಲಿದೆ? ರಾಜ್ಯದ ಜನರ ಹಿತಾಸಕ್ತಿ ಇದರಲ್ಲಿದೆ. ಬಿಜೆಪಿಯವರು
ಅಧಿಕಾರದಲ್ಲಿದ್ದಾಗಲೇ ಈ ಎಲ್ಲದರ ಬಗ್ಗೆ ತ£ಖೆ ಮಾಡಿಸಿ ಎಂದು ನಾವು ಒತ್ತಾಯ ಮಾಡಿದ್ದೆವು ಎಂದು ಮಾಧ್ಯಮದವರಿಗೆ ನೆನಪಿಸಿದರು.
*ದ್ವೇಷದ ರಾಜಕಾರಣ ಮಾಡುತ್ತಿಲ್ಲ.*
ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಅವರು ಅಧಿಕಾರದಲ್ಲಿದ್ದಾಗ ೪೦ ಪರ್ಸೆಂಟ್ ಗೆ ಒತ್ತಾಯ ಮಾಡಿರಲಿಲ್ಲವೇ? ತ£ಖೆಗೆ ನಾವು ಆಗಲೇ ಒತ್ತಾಯ ಮಾಡಿದ್ದೆವು. ಅಧಿಕಾರಕ್ಕೆ ಬಂದ ನಂತರ ತ£ಖೆಗೆ ಕ್ರಮ ಕೈಗೊಂಡಿದ್ದೇವೆ. ಹಾಗಾದರೆ ಜನರ ದುಡ್ಡನ್ನು ತಿಂದುಕೊಂಡು ಹೋಗಿ ಎಂದು ಬಿಡಬೇಕಿತ್ತೆ ಎಂದು ಪ್ರಶ್ನಿಸಿದರು.
*ಸಿಎಂ, ಡಿಸಿಎಂ ಸಂಬಂಧ ಉತ್ತಮಗೊಳ್ಳುತ್ತಿದೆ*
ವಿರೋಧ ಪಕ್ಷಗಳು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸಂಬಂಧದ ಬಗ್ಗೆಯೇ ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ £Ãಡಿ ಅವರು ಹೇಳಿದಷ್ಟೂ ನಮ್ಮ ಸಂಬಂಧ ಉತ್ತಮಗೊಳ್ಳುತ್ತಿದೆ ಎಂದು ತಿಳಿ ಹೇಳಿದರು.


Leave a Reply