ಬೆಳಗಾವಿ : ಜಿಲ್ಲೆಯ ಕೆಲವೆಡೆ ಇಂದು ಗುಡುಗು-ಸಿಡಿಲು ಸಮೇತ ಭಾರಿ ಮಳೆಯಾಗಿದ್ದು, ಭಾರಿ ಸಿಡಿಲೊಂದು ರೈತ ಮಹಿಳೆಯನ್ನು ಬಲಿ ಪಡೆದಿದೆ. ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದ ಮಲ್ಲಮ್ಮ ಕಲ್ಮೇಶ ವಟವಟಿ (38) ಎಂಬಾಕೆ ಸಾವಿಗೀಡಾದವರು.
ಇವರು ಗ್ರಾಮದ ಹೊರವಲಯದ ತಮ್ಮ ಹೊಲದಲ್ಲಿ ಜಾನುವಾರುಗಳಿಗಾಗಿ ಮೇವು ತೆಗೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಸಿಡಿಲಪ್ಪಳಿಸಿದೆ. ಸಿಡಿಲಿನ ಹೊಡೆತಕ್ಕೆ ಈಕೆಯ ಹೊಟ್ಟೆ ಛಿದ್ರಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.