ಬೆಳಗಾವಿ,ಏ.೨೯: ಪ್ರಸ್ತುತ ದಿನಗಳಲ್ಲಿ ಮಹಿಳೆಯರಿಗೆ ಕಾನೂನಿನ ಅರಿವು ಇರಬೇಕಾಗಿರುವುದು ಬಹಳ ಅವಶ್ಯಕವಾಗಿದ್ದು, ದಿನನಿತ್ಯ ಬಳಕೆಯಾಗುವ ಕಾನೂನುಗಳ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಹಮ್ಮಿಕೊಳ್ಳಬೇಕಾಗಿದೆ. ಶಾಲೆಗಳಲ್ಲಿ, ಮನೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಈ ಮೂಲಕ ಲೈಂಗಿಕ ಅಪರಾದಗಳಿಂದ ಮಕ್ಕಳನ್ನು ರಕ್ಷಿಸಬಹುದಾಗಿದೆ. ಹಕ್ಕು ಪಡೆಯುವಲ್ಲಿ ಮಹಿಳೆಯರು ಹೋರಾಟ ಮಾಡಬೇಕಿಲ್ಲ ಅನುಭವಿಸಿ ಗಳಿಸಬೇಕಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವಿಜಯ ದೇವರಾಜ ಅರಸ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಗುರುವಾರ(ಏ.೨೮) ನೆಹರೂ ನಗರದ ಮಹೇಶ್ವರಿ ಅಂಧ ಮಕ್ಕಳ ಸೇವಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ್ಲ ನಡೆದ ಮಹಿಳೆ ಮತ್ತು ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಬಿಮ್ಸ್ ಮುಖ್ಯ ಆಡಳಿತಾಧಿಕಾರಿ ಸಯೀದಾ ಆಫ್ರೀÀನ್ಭಾನು ಬಳ್ಳಾರಿ, ಸಂವಿಧಾನದ ಮೂಲಕÀ ಸಮಾನತೆ ಹಕ್ಕು ಮಹಿಳೆಯರಿಗೆ ದೊರಕಿದ್ದರು, ಪೂರ್ಣ ಪ್ರಮಾಣದಲ್ಲಿ ಲಿಂಗ ಸಮಾನತೆ ಸಾಧಿಸುವಲ್ಲಿ ನಾವಿಂದು ವಿಫಲರಾಗಿದ್ದು, ಲಿಂಗ ಸಮಾನತೆ ಎನ್ನುವುದು ನಮ್ಮ ಮನೆಯಿಂದಲೇ ಪ್ರಾರಂಭವಾಗಬೇಕಿದೆ ಎಂದರು.
ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಭಾರತಿ ವಾಳ್ವೇಕರ ಮಾತನಾಡಿ, ಜೀವನದ ಪ್ರತಿ ಹಂತದಲ್ಲು ಹೆಣ್ಣು ಮಕ್ಕಳು ಶೋಷಣೆಗೆ ಒಳಗಾಗುತ್ತಿದ್ದು, ಎಲ್ಲವನ್ನು ಸಹಿಸಿಕೊಳ್ಳುವ ಮೂಲಕ ಕಾನೂನುಗಳ ಸರಿಯಾದ ಬಳಕೆಯಾಗುತ್ತಿಲ್ಲ. ಆದ್ದರಿಂದ ಕಾಯ್ದೆ ಕಾನೂನುಗಳ ಅನುಷ್ಠಾನದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಎಂದರು.
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ರಿ ಯೋಜನೆಯಡಿ ಪ್ರಶಸ್ತಿ ಪುರಸ್ಕೃತ ಮಕ್ಕಳಿಗೆ ಪ್ರಶಸ್ತಿ, ಪ್ರಮಾಣ ಪತ್ರ ವಿತರಣೆ ಹಾಗೂ ರಾಜ್ಯ ಮಟ್ಟದ ಶೌರ್ಯ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ ಗೌರವಿಸಲಾಯಿತು. ನಂತರ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಕಾನೂನು ಅರಿವು ಕಾರ್ಯಾಗಾರವನ್ನು ನಡೆಸಲಾಯಿತು.
ಕಾರ್ಯಕ್ರದ ಅಧ್ಯಕ್ಷರಾದ ಶ್ರೀಮತಿ ಪ್ರಭಾವತಿ ಪತ್ತಾರ, ಅಧ್ಯಕ್ಷರು ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಬೆಳಗಾವಿ, ಅಂಗನವಾಡಿ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಇಲಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Gadi Kannadiga > Local News > ಮಹಿಳೆ ಮತ್ತು ಕಾನೂನು ಅರಿವು ಕಾರ್ಯಗಾರ ಮಹಿಳೆಯರಿಗೆ ಕಾನೂನು ಅರಿವು ಅಗತ್ಯವಾಗಿದೆ: ವಿಜಯ ದೇವರಾಜ್ ಅರಸ್
ಮಹಿಳೆ ಮತ್ತು ಕಾನೂನು ಅರಿವು ಕಾರ್ಯಗಾರ ಮಹಿಳೆಯರಿಗೆ ಕಾನೂನು ಅರಿವು ಅಗತ್ಯವಾಗಿದೆ: ವಿಜಯ ದೇವರಾಜ್ ಅರಸ್
Suresh29/04/2022
posted on
