ಗದಗ ಡಿಸೆಂಬರ್ ೧೭: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಿ ಗ್ರ‍್ರಾಮೀಣಾಭಿವೃದ್ಧಿ ಇಲಾಖೆ ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿದೆ. ಗರ್ಭಿಣಿಯರು ಮತ್ತು ಬಾಣಂತಿಯರ ದೈಹಿಕ ಪರಿಸ್ಥಿತಿಯನ್ನು ಗಮದಲ್ಲಿಟ್ಟುಕೊಂಡು ರಿಯಾಯಿತಿ ನೀಡಲಾಗಿದೆ. ೬ ತಿಂಗಳು ತುಂಬಿದ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನದ ದಿನಾಂಕದಿಂಧ ೬ ತಿಂಗಳವರೆಗೆ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.೫೦ ರಿಯಾಯಿತಿ ನೀಡಿ ಆದೇಶಿಸಲಾಗಿದೆ. ಈ ರಿಯಾಯಿತಿ ಪಡೆಯಲು ಆರೋಗ್ಯ ಇಲಾಖೆ ನೀಡುವ ತಾಯಿ ಕಾರ್ಡ್ ಆಧಾರವಾಗಿ ಪರಿಗಣಿಸಲಾಗುತ್ತದೆ. ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.೫೦ ರಿಯಾಯಿತಿ ಇದೆ. ಪ್ರಸ್ತುತ ಮಹಿಳೆಯರ ಭಾಗವಹಿಸುವಿಕೆ ಶೇ.೫೧ ಇದ್ದು, ಇದನ್ನುಶೇ.೬೦ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಈ ಯೋಜನೆಯಡಿ ಕೈಗೆತ್ತಿಕೊಳ್ಳುವ ಕಾಮಗಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಮಾಡಲು ಈಗಾಗಲೆ ಶೇ.೬೦ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ ೧೦ ರಷ್ಟು ರಿಯಾಯತಿ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆ ತಿಳಿಸಿದೆ.
Gadi Kannadiga > State > ಮಹಿಳಾ ಸ್ನೇಹಿ ನರೇಗಾ ಗರ್ಭಿಣಿ, ಬಾಣಂತಿಯರಿಗೆ ಶೇ.೫೦ ಕೆಲಸ ರಿಯಾಯಿತಿ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023