This is the title of the web page
This is the title of the web page

Please assign a menu to the primary menu location under menu

State

ವಿವಿಧ ಸಾಕ್ಷರತಾ ಕಾರ್ಯಕ್ರಮಗಳ ಕಾರ್ಯಾಗಾರ


ಗದಗ ಸೆಪ್ಟೆಂಬರ್ ೨೦: ೨೦೨೨–೨೩ ನೇ ಸಾಲಿಗಾಗಿ ಅನುಷ್ಠಾಗೊಳ್ಳುತ್ತಿರುವ ವಿವಿಧ ಸಾಕ್ಷರತಾ ಕಾರ್ಯಕ್ರಮಗಳ ಕಾರ್ಯಾಗಾರವನ್ನು ಶ್ರೀ ಜಗದ್ಗುರು ಬೂದೀಶ್ವರ ವಿದ್ಯಾಪೀಠ, ಹೊಸಳ್ಳಿ, ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಜಿ.ಎಮ್. ಬಸವಲಿಂಗಪ್ಪ ಮಾತನಾಡಿ ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು, ಸರ್ವರಿಗೂ ಅಕ್ಷರಾಭ್ಯಾಸ ಅತ್ಯವಶ್ಯಕ. ದೇಶ, ರಾಜ್ಯ ಹಾಗೂ ಜಿಲ್ಲೆ ಸಾಕ್ಷರತೆಯಲ್ಲಿ ಶೇ೧೦೦% ರಷ್ಟು ಸಾಧನೆ ಮಾಡಿದರೆ ದೇಶ ಪ್ರಗತಿ ಹೊಂದಲು ಸಾಧ್ಯ. ಅನಕ್ಷರಸ್ಥ ಜನರನ್ನು ಸಾಕ್ಷರರನ್ನಾಗಿ ಮಾಡುವÀ ಬೃಹತ್ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ಸಾಕ್ಷರತಾ ಇಲಾಖೆಯು ಶಾಲಾ ಶಿಕ್ಷಣ ಇಲಾಖೆಯೊಂದಿಗೆ ವಿಲೀನವಾಗಿರುವುದರಿಂದ ಶಿಕ್ಷಣ ಇಲಾಖೆಗೆ ಸಂಬಂಧಪಡುವ ಜಿಲ್ಲಾ ಮಟ್ಟದ ಮತ್ತು ಎಲ್ಲಾ ತಾಲೂಕಾ ಮಟ್ಟದ ಶಿಕ್ಷಣಾಧಿಕಾರಿಗಳು / ಸಮನ್ವಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಾಕ್ಷರತಾ ಕಾರ್ಯಕ್ರಮಕ್ಕೆ ಕೈ ಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕಾರ ನೀಡಬೇಕೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಡಯಟ್ ಪ್ರಾಚಾರ್ಯರಾದ ಎಸ್. ಡಿ. ಗಾಂಜಿ ಅವರು ಮಾತನಾಡಿ ಜಗತ್ತಿನ ಎಲ್ಲ ಜನರಿಗೂ ಶಿಕ್ಷಣ ಕಲಿಕೆಗೆ ಅವಕಾಶ ಕಲ್ಪಿಸುವುದು ಸಾಕ್ಷರತಾ ದಶಕದ ಉದ್ಧೇಶವಾಗಿದೆ. ಸಾಕ್ಷರತೆ ಮಾನವ ಹಕ್ಕುಗಳಲ್ಲಿ ಒಂದಾಗಿದೆ. ಮಾನವನ ಅಭಿವೃದ್ಧಿಗೆ ಅವಕಾಶ ಕಲ್ಪಿಸಿ ಕೊಡುತ್ತದೆ. ಸಾಕ್ಷರತೆ ಬೆಳೆದು ಬಂದ ಇತಿಹಾಸದ ಅಂದರೆ ಸ್ವಾತಂತ್ರö್ಯ ಪೂರ್ವದಿಂದ ಸ್ವಾತಂತ್ರö್ಯ ನಂತರ ನಡೆದ ಅನೇಕ ಸಾಕ್ಷರತಾ ಕಾರ್ಯಕ್ರಮಗಳ ಕುರಿತು ವಿವರಿಸಿದರು.
ಕಾರ್ಯಾಗಾರದಲ್ಲಿ ಡಿ.ವೈ.ಪಿಸಿ. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಎಲ್ಲ ಉಪನ್ಯಾಸಕರು, ಅಕ್ಷರ ದಾಸೋಹದ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕೇತ್ರ ಸಂಪನ್ಮೂಲ ಕೇಂದ್ರಗಳ ಸಮನ್ವಯಾಧಿಕಾರಿಗಳು, ಕೇಂದ್ರ ಸಂಪನ್ಮೂಲ ವ್ಯಕ್ತಿಗಳು, ಸಮೂಹ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.
ಶ್ರೀ ಜಗದ್ಗುರು ಅಭಿನವ ಬೂದೀಶ್ವರ ಸ್ವಾಮಿಜಿಯವರು ಕಾರ್ಯಾಗಾರವನ್ನು ಉದ್ಧೇಶಿಸಿ ಶಿಕ್ಷಣ ಕ್ಷೇತ್ರದಲ್ಲಿ ಗುರಗಳ ಹಾಗೂ ವಿದ್ಯಾರ್ಥಿಗಳ ಸಂಬಂಧ ಹೇಗಿರಬೇಕು ಎಂಬುದರ ಬಗ್ಗೆ ಆಶೀರ್ವಚನ ನೀಡಿದರು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ವೀರಣ್ಣ ಮೆಣಸಿನಕಾಯಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ನಡೆದ ಸಾಕ್ಷರತಾ ಕಾರ್ಯಕ್ರಮಗಳು ಹಾಗೂ ಸಾಕ್ಷರತೆಯಲ್ಲಿ ಸಾಧಿಸಿದ ಅಂಕಿ ಅಂಶಗಳ ಬಗ್ಗೆ ವಿವರಣೆ ನೀಡಿದರು.


Gadi Kannadiga

Leave a Reply