ಬೆಳಗಾವಿ, ಅ.೦೧ : ನಮ್ಮ ಸಮಾಜ ಒಂದು ಒಳ್ಳೆಯ ಸಂಸ್ಕೃತಿ ವಿಚಾರ ಶೀಲ ನಾಡಾಗಿದ್ದು, ಇದನ್ನು ನಾವು ಮುಂದುವರೆಸಿಕೊಂಡು ಹೋಗುವುದು ನಮ್ಮ ಕರ್ತವ್ಯವಾಗಿದೆ. ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವಲ್ಲಿ ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವುದು ತುಂಬಾ ಅವಶ್ಯಕವಾಗಿದ್ದು, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆಯಾಗುವಲ್ಲಿ ತಡೆಗಟ್ಟುವುದು ಹಾಗೂ ಅರಿವು ಮೂಡಿಸುವುದು ತುಂಬಾ ಮಹತ್ವವಾದ ಕಾರ್ಯವಾಗಿರುತ್ತದೆ.
ಈ ಸಾಮಾಜಿಕ ಪಿಡುಗನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲ ಆದರೆ ಅತೀ ಕಡಿಮೆ ಹಂತಕ್ಕೆ ತಂದು ಸುಖಿ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಯತ್ನಿಸೋಣ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪಿ. ಮುರಳಿ ಮೋಹನ ರೆಡ್ಡಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
“ವಿಶ್ವ ಮಾನವ ಕಳ್ಳ ಸಾಗಾಣಿಕೆ ನಿಷೇಧ ದಿನದ” ಅಂಗವಾಗಿ ಮಹಿಳೆಯರ ಹಾಗೂ ಮಕ್ಕಳ ಸಾಗಾಣಿಕೆ ಸ್ಥಿತಿಗತಿ ತಡೆಗಟ್ಟುವಿಕೆ, ರಕ್ಷಣೆ ಹಾಗೂ ಪುನರ್ವಸತಿ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಮೇಲ್ವಿಚಾರಕಿಯರು ಹಾಗೂ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಜುಲೈ.೩೧ ೨೦೨೩ ರಂದು ಜಿಲ್ಲಾ ಪಂಚಾಯತ ಸಭಾಗೃಹದಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಮಾನವ ಕಳ್ಳ ಸಾಗಾಣಿಕೆ ಎಂಬುದು ಒಂದು ಬೃಹತ ಜಾಲವಾಗಿದ್ದು, ಇದನ್ನು ತಡೆಗಟ್ಟಬೇಕಾದರೆ ಎಲ್ಲ ಕ್ಷೇತ್ರದ ಅಧಿಕಾರಿಗಳು/ಸಿಬ್ಬಂದಿಗಳು/ಸಂಸ್ಥೆಗಳು ಕ್ರೀಯಾಶೀಲತೆಯಿಂದ ಕಾರ್ಯನಿರ್ವಹಿಸಬೇಕು ಮತ್ತು ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕು ಗ್ರಾಮ ಮಟ್ಟದಲ್ಲಿ ಸ್ಥಳೀಯವಾಗಿ ತಮ್ಮ ಮುಂದೆ ಯಾವುದಾದರು ಮಕ್ಕಳಿಗೆ/ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳು ಬಂದಾಗ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ಸ್ಥಿತಿಗತಿ ಕುರಿತು ಈ ಕಾರ್ಯಾಗರವನ್ನು ಹಮ್ಮಿಕೊಂಡಿದ್ದು ಅತ್ಯಂತ ಸಂತೋಷದ ವಿಷಯವಾಗಿದ್ದು, ಈ ತರಬೇತಿಯನ್ನು ಎಲ್ಲರೂ ಚೆನ್ನಾಗಿ ಅರಿತುಕೊಂಡು ತಮ್ಮ ಕ್ಷೇತ್ರಮಟ್ಟದಲ್ಲಿ ಕ್ರೀಯಾಶೀಲತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವ ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ಅವರು ಸಿಬ್ಬಂದಿಗಳಿಗೆ ತಿಳಿಸಿದರು.
ಪಂಚಾಯತ ರಾಜ್ ಅಧಿನಿಯಮ ಕಾಯ್ದೆ ೧೯೯೩ ರನ್ವಯ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಾದ ಪಂಚಾಯತಗಳಲ್ಲಿ ಮಹಿಳೆಯರ ಹಾಗೂ ಮಕ್ಕಳ ಕಾವಲು ಸಮಿತಿ ರಚಿಸಲಾಗಿದ್ದು, ಕಡ್ಡಾಯವಾಗಿ ಪ್ರತಿ ತ್ರೆöÊಮಾಸಿಕವಾಗಿ ಸಮಿತಿ ಮಾಡಬೇಕು. ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳಾದ ಮಕ್ಕಳ ಸಾಗಾಣಿಕೆ ಬಾಲ್ಯವಿವಾಹ, ಪೋಕ್ಸೋ, ಬಾಲಕಾರ್ಮಿಕ, ಜೀತಪದ್ಧತಿ, ಬೀಕ್ಷಾಟನೆ, ಏಕಪೋಷಕ, ಅನಾಥ, ಪರಿತ್ಯಕ್ತ, ಕಾಣೆಯಾದ ಮಕ್ಕಳ ಇನ್ನೀತರ ಪ್ರಕರಣಗಳ ಕುರಿತು ತಮ್ಮ ಗಮನಕ್ಕೆ ಬಂದಾಗ ತಾವು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿ ಆ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಪಡಿಸಬೇಕು. ಹಾಗೂ ಯಾವುದೇ ಮಕ್ಕಳು ತಮ್ಮ ಮುಂದೆ ಸಮಸ್ಯೆ ಹೇಳಿಕೊಂಡು ಬಂದಲ್ಲಿ ಆ ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಆಪ್ತ ಸಮಾಲೋಚನೆ ಒದಗಿಸಬೇಕು ಎಂದು ತಿಳಿಸಿ ಮಕ್ಕಳಿಗೆ ಸಂಬಂಧಿಸಿದ ಯಾವುದೇ ಕಾಯ್ದೆ ಕಾನೂನು ಸರ್ಕಾರದ ಸುತ್ತೋಲೆಗಳು ಬೇಕಾದರೆ ತಿತಿತಿ.mಚಿಞಞಚಿಟhಚಿಞಞu.ಛಿom ತಂತ್ರಾಂಶದಲ್ಲಿ ಮಾಹಿತಿ ದೊರಕುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಹಾಂತೇಶ ಭಜಂತ್ರಿ ಅವರು ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿ ಮಾನವ ಕಳ್ಳ ಸಾಗಾಣಿಕೆ ಬೆಳೆದಿದ್ದು, ಅತ್ಯಂತ ಅಪಾಯಕಾರಿ ಹಾಗೂ ಲಾಭದಾಯಕ ವೃತ್ತಿಯಾಗಿದ್ದು, ಇದನ್ನು ತಡೆಗಟ್ಟಬೇಕಾದರೆ ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯತಗಳಲ್ಲಿ ಕಡ್ಡಾಯವಾಗಿ ಮಹಿಳೆಯ ಮತ್ತು ಮಕ್ಕಳ ಕಾವಲು ಸಮಿತಿ ಸಭೆಗಳನ್ನು ಪ್ರತಿ ತ್ರೆöÊಮಾಸಿಕವಾಗಿ ಮಾಡಬೇಕು. ಗ್ರಾಮಗಳಲ್ಲಿ ಮಹಿಳೆಯರು/ಮಕ್ಕಳು ಕಾಣೆಯಾದಲ್ಲಿ ಅಂತಹ ವಿಷಯಗಳು ಸಮಿತಿಯನ್ನು ಚರ್ಚಿಸಿ ಪೊಲೀಸ್ ಇಲಾಖೆಯ ಸಹಕಾರದಿಂದ ಪತ್ತೆ ಹಚ್ಚಬೇಕು. ಆದ್ದರಿಂದ ಗ್ರಾಮ ಮಟ್ಟದಲ್ಲಿಯೇ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ಕುರಿತು ಅರಿವು ಮೂಡಿಸುವುದು ಅತ್ಯಂತ ಮಹತ್ವವಾದ ಕಾರ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ನಾಗರಾಜ ಆರ್ ಅವರು ಹೇಳಿದರು.
ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳಾದ ಬಸವರಾಜ ಅಡಿಮಠ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಸಿಸ್ಟರ್ ಲೂರ್ದ ಮೇರಿ ಜೆ, ಯುನಿಷಫ್ ಮಕ್ಕಳ ರಕ್ಷಣಾ ಯೋಜನೆ ಸಂಯೋಜಕರಾದ ಹರೀಶ ಜೋಗಿ ಹಾಗೂ ಮತ್ತಿತರರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.
Gadi Kannadiga > Local News > “ವಿಶ್ವ ಮಾನವ ಕಳ್ಳ ಸಾಗಾಣಿಕೆ ನಿಷೇಧ ದಿನ”:ಒಂದು ದಿನದ ತರಬೇತಿ ಕಾರ್ಯಾಗಾರ
“ವಿಶ್ವ ಮಾನವ ಕಳ್ಳ ಸಾಗಾಣಿಕೆ ನಿಷೇಧ ದಿನ”:ಒಂದು ದಿನದ ತರಬೇತಿ ಕಾರ್ಯಾಗಾರ
Suresh01/08/2023
posted on