ಗದಗ ನವೆಂಬರ್ ೨೯: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಗದಗ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸೇವಾ ನಿರತ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಗದಗ ಜಿಲ್ಲಾಡಳಿತ ಸಭಾಂಗಣದಲ್ಲಿ ಡಿಸೆಂಬರ್ ೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕೃಷಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಹಾಲಪ್ಪ ಆಚಾರ್, ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರುಗಳು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಗದಗ ಶಾಸಕ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ , ಪಿ.ಸಿ. ಗದ್ದಿಗೌಡರ , ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್ , ಸಲೀಂ ಅಹ್ಮದ್ , ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಮಾರ್ಕೆಟಿಂಗ್ ಕಮ್ಯುನಿಕೇಷನ್ ಆಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ನ ಅಧ್ಯಕ್ಷರಾದ ಎಂ.ಎಸ್. ಕರಿಗೌಡ್ರ , ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಉಷಾ ದಾಸರ, ಉಪಾಧ್ಯಕ್ಷರಾದ ಶ್ರೀಮತಿ ಸುನಂದಾ ಬಾಕಳೆ , ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ಧಪ್ಪ ಪಲ್ಲೇದ್ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮದ್ ಮೊಹಸಿನ್, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ ಗುರುಪ್ರಸಾದ ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಕೆ .ಮಹಾಂತೇಶ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ ಸರ್ವರಿಗೂ ಸ್ವಾಗತ ಕೋರಿದ್ದಾರೆ.
Gadi Kannadiga > State > ವಿಶ್ವ ವಿಕಲಚೇತನರ ದಿನಾಚರಣೆ