This is the title of the web page
This is the title of the web page

Please assign a menu to the primary menu location under menu

Local News

ವಿಶ್ವ ಜನಸಂಖ್ಯಾ ದಿನಾಚರಣೆ-೨೦೨೨ ಸರಕಾರದ ಯೋಜನೆಗಳ ಸದ್ಬಳಕೆಗೆ ಸಂಸದೆ ಮಂಗಳಾ ಅಂಗಡಿ ಕರೆ


ಬೆಳಗಾವಿ, ಜುಲೈ ೧೧: ಜನಸಂಖ್ಯೆ ನಿಯಂತ್ರಣದ ಜೊತೆಗೆ ಇತ್ತೀಚೆಗೆ ಹರಡುತ್ತಿರುವ ಅನೇಕ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣಕ್ಕೂ ಕೇಂದ್ರ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಜನರು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯ ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ಸೋಮವಾರ (ಜುಲೈ ೧೧) ಬಿಮ್ಸ್ ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ-೨೦೨೨ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜನಸಂಖ್ಯಾ ಸ್ಫೋಟದ ಕುರಿತು ಉಪನ್ಯಾಸ ನೀಡಿದ ಲಿಂಗರಾಜ ಕಾಲೇಜಿನ ಅರ್ಥಶಾಸ್ತ್ರದ ಹಿರಿಯ ಉಪನ್ಯಾಸಕ ಜಿ.ಎಂ.ಮಠಪತಿ ಅವರು, ವಿಶ್ವದಲ್ಲಿ ೨೦೨೩ರ ಏಪ್ರಿಲ್ ಅಷ್ಟೊತ್ತಿಗೆ ೮ ಬಿಲಿಯನ್ ಗಡಿ ದಾಟಲಿದೆ. ಜನಸಂಖ್ಯೆ ಹೇರಳವಾಗಿ ಬೆಳೆಯುತ್ತಿದೆ, ಆಹಾರ ಉತ್ಪಾದನೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಜನಸಂಖ್ಯಾ ಸ್ಫೋಟದ ಅನುಭವವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ವಿಶ್ವದ ಜನಸಂಖ್ಯಾ ಸ್ಫೋಟದಲ್ಲಿ ಚೈನಾ ಮತ್ತು ಭಾರತದಲ್ಲಿ ಶೇ.೪೦ ರಷ್ಟು ಪ್ರಮಾಣ ದಾಖಲಾಗುತ್ತಿದೆ. ಆದರೆ ಚೈನಾ ಜನಸಂಖ್ಯಾ ನಿಯಂತ್ರಣ ಕುರಿತು ಕೈಗೊಳ್ಳುತ್ತಿರುವ ಕಟ್ಟುನಿಟ್ಟಿನ ಕ್ರಮಗಳು ಭಾರತಕ್ಕೂ ಮನದಟ್ಟಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬಿಮ್ಸ್ ನಿರ್ದೇಶಕ ಡಾ. ಈರಣ್ಣ ಪಲ್ಲೇದ ಅವರು ವಿಪರೀತ ಜನಸಂಖ್ಯೆಯಿಂದಾಗಿ ಭೂಮಿಯ ಮೇಲೆ ಜನಸಂಖ್ಯಾ ಅಸಮತೋಲನ ಸೃಷ್ಠಿಯಾಗಿದೆ. ಹೀಗಾಗಿ ಜನಸಂಖ್ಯಾ ನಿಯಂತ್ರಣದಲ್ಲಿ ಸಾರ್ವಜನಿಕರು ಜಾಗೃತೆ ವಹಿಸುವುದು ಅಗತ್ಯವಾಗಿದೆ ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳಗಾವಿ ಉತ್ತರ ಶಾಸಕ ಅನೀಲ ಬೆನಕೆ ಅವರು ಪುಟ್ಟ ಕುಟುಂಬದ ಮೂಲಕವೇ ದೇಶದ ಅಭಿವೃದ್ಧಿ ಸಾಧ್ಯವಿದೆ. ಹೀಗಾಗಿ ಜನಸಂಖ್ಯಾ ನಿಯಂತ್ರಣಕ್ಕಾಗಿ ಸರ್ಕಾರ ರೂಪಿಸುತ್ತಿರುವ ಯೋಜನೆಗಳ ಕುರಿತು ಸಾರ್ವಜನಿಕರು ಜಾಗೃತರಾಗಬೇಕಿದೆ ಎಂದು ಮನವಿ ಮಾಡಿಕೊಂಡರು.
ಜನಸಂಖ್ಯಾ ನಿಯಂತ್ರಣ ಜಾಗೃತಿ ಕರ ಪತ್ರ ಲೋಕಾರ್ಪಣೆ:
ದೇಶದಲ್ಲಿ ಪ್ರತಿ ದಿನವೂ ಜನಸಂಖ್ಯೆ ವಿಪರೀತ ಆಗುತ್ತಿರುವುದರಿಂದ ಅದರ ನಿಯಂತ್ರಣ ಹೇಗೆ ಸಾಧ್ಯ ಅನ್ನುವುದದನ್ನು ಜನರಿಗೆ ಮನದಟ್ಟು ಮಾಡುವುದಕ್ಕೆ ಆರೋಗ್ಯ ಇಲಾಖೆಯಿಂದ ಪ್ರಕಟಿಸಲಾಗಿರುವ ಜನಸಂಖ್ಯಾ ನಿಯಂತ್ರಣ ಜಾಗೃತಿ ಮೂಡಿಸುವ ಕರ ಪತ್ರಗಳನ್ನು ಗಣ್ಯರು ಲೋಕಾರ್ಪಣೆಗೊಳಿಸಿದರು.
ಆರೋಗ್ಯ ಇಲಾಖೆಯ ಸಾಧಕರಿಗೆ ಸತ್ಕಾರ:
ಪ್ರಸಕ್ತ ವರ್ಷದಲ್ಲಿ ಜನಸಂಖ್ಯಾ ನಿಯಂತ್ರಣಕ್ಕಾಗಿ ಅವಿರತ ಸೇವೆ ಸಲ್ಲಿಸಿದ ಜಿಲ್ಲೆಯ ವಿವಿಧ ತಾಲೂಕಾ ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಶುಶ್ರೂಷ, ಆರೋಗ್ಯ ಸುರಕ್ಷಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಶಾಲು ಹೊದಿಸಿ, ಪುಷ್ಪ ಹಾಗೂ ಪ್ರಮಾಣ ಪತ್ರ ನೀಡಿ ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಸುಧಾಕರ ಆರ್.ಸಿ, ವೈದ್ಯಕೀಯ ಅಧೀಕ್ಷಕರಾದ ಡಾ.ಅಣ್ಣಾಸಾಹೇಬ ಪಾಟೀಲ ಹಾಗೂ ಬಿಮ್ಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ವ್ಹಿ.ಕಿವಡಸಣ್ಣವರ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಮಹೇಶ ಕೋಣಿ ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ ಉನ್ನತಿಯ ಹೊಸ ಅಧ್ಯಾಯ ಬರೆಯೋಣ ಘೋಷವಾಕ್ಯ ಕುರಿತು ಮಾತನಾಡಿದರು. ಬಸವರಾಜ ಯಲಿಗಾರ ನಿರೂಪಿಸಿ ವಂದಿಸಿದರು.


Gadi Kannadiga

Leave a Reply