This is the title of the web page
This is the title of the web page

Please assign a menu to the primary menu location under menu

State

ವಿಶ್ವ ಹಿರಿಯ ನಾಗರಿಕರ ದಿನಾಚರಣೆ -೨೦೨೨


ಗದಗ ಸೆಪ್ಟೆಂಬರ್ ೨೯: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ , ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವಾನಿರತ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಕ್ಟೋಬರ್ ೧ ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ -೨೦೨೨ ಯನ್ನು ಹಮ್ಮಿಕೊಳ್ಳಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಹಾಲಪ್ಪ ಆಚಾರ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಮತ್ತು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಗದಗ ಶಾಸಕ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ , ಪಿ.ಸಿ. ಗದ್ದಿಗೌಡರ , ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್ , ಸಲೀಂ ಅಹ್ಮದ್ , ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಮಾರ್ಕೆಟಿಂಗ್ ಕಮ್ಯುನಿಕೇಷನ್ ಆಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ನ ಅಧ್ಯಕ್ಷರಾದ ಎಂ.ಎಸ್. ಕರಿಗೌಡ್ರ , ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಉಷಾ ದಾಸರ, ಉಪಾಧ್ಯಕ್ಷರಾದ ಶ್ರೀಮತಿ ಸುನಂದಾ ಬಾಕಳೆ , ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ಧಪ್ಪ ಪಲ್ಲೇದ್ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಮೊಹಮದ್ ಮೊಹಸಿನ್, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜು, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಆಗಮಿಸಲಿದ್ದಾರೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿಗಳಾದ ಕೆ.ಮಹಾಂತೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ವೈ ಶೆಟ್ಟೆಪ್ಪಣವರ ಸರ್ವರಿಗೂ ಸ್ವಾಗತ ಕೋರಿದ್ದಾರೆ.


Gadi Kannadiga

Leave a Reply