ಬೆಳಗಾವಿ : ವೀರಶೈವ ಲಿಂಗಾಯತ ಬಡ ವಿದ್ಯಾರ್ಥಿನಿಯರ ವಸತಿಗೃಹ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧುವಾರ ದಿನಾಂಕ 13 ರಂದು ಮುಂಜಾನೆ ಎಂಟೂವರೆ ಗಂಟೆಗೆ ಅಡಿಗಲ್ಲನ್ನು ಇಡಲಿದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ಶ್ರೀಮತಿ ರತ್ನಪ್ರಭಾ ಬೆಲ್ಲದ ಹೇಳಿದ್ದಾರೆ .
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಪಕ್ಕದಲ್ಲಿರುವ ಸುಭಾಷ್ ನಗರದಲ್ಲಿ ಈ ವಸತಿಗೃಹ ನಿರ್ಮಾಣವಾಗಲಿದೆ ಕಾರ್ಯಕ್ರಮದಲ್ಲಿ ಬೆಳಗಾವಿ ನಾಗನೂರು ರುದ್ರಾಕ್ಷಿಮಠದ ಡಾ ಅಲ್ಲಮಪ್ರಭು ಸ್ವಾಮೀಜಿ ,ಬೆಳಗಾವಿಯ ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ,ಕೆಎಲ್ ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ , ಸಂಸದರಾದ ಶ್ರೀಮತಿ ಮಂಗಲಾ ಅಂಗಡಿ ,ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ , ಕೆಎಲ್ ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ,ರುದ್ರಣ್ಣ ಹೊಸಕೇರಿ ಮತ್ತಿತರ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದವರು ವಿವರಿಸಿದರು .
ಈ ವಸತಿ ಗೃಹ ನಿರ್ಮಾಣಕ್ಕೆ ಸಮಾಜದ ಗಣ್ಯರ ಹಾಗೂ ಉದಾರ ದಾನಿಗಳ ಸಂಪೂರ್ಣ ಸಹಕಾರ ದೊರೆಯುವ ನಿರೀಕ್ಷೆ ಇದೆ ಆರಂಭದಲ್ಲಿ ಐವತ್ತು ವಿದ್ಯಾರ್ಥಿನಿಯರಿಗೆ ವ್ಯವಸ್ಥೆಗೊಳಿಸಲು ಯೋಜಿಸಲಾಗಿದ್ದು ನಂತರ ವಿಸ್ತರಿಸಲಾಗುವುದು ಎಂದು ಪತ್ರಿಕಾ ಪರಿಷತ್ತಿನಲ್ಲಿ ಉಪಸ್ಥಿತರಿದ್ದ ಮಾರುತಿ ಝಿರಲಿ ಹೇಳಿದರು .ರಮೇಶ ಕಳಸಣ್ಣವರ್ ಜ್ಯೋತಿ ಭಾವಿಕಟ್ಟಿ ಜಗದೀಶ್ ಕೊರಬು ಪತ್ರಿಕಾ ಪರಿಷತ್ತಿನಲ್ಲಿ ಉಪಸ್ಥಿತರಿದ್ದರು .