ಬೆಳಗಾವಿ: ಬೆಲೆ ಏರಿಕೆ ಮತ್ತು ರಾಜ್ಯ ಬಿಜೆಪಿ ಸರಕಾರದ ೪೦ ಪರ್ಸೆಂಟ್ ಕಮೀಷನ್ ವಿರೋಧಿಸಿ ಯುವ ಕಾಂಗ್ರೆಸ್ನಿಂದ ಬೆಳಗಾವಿಯಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ. ವಿ. ಶ್ರೀನಿವಾಸ್, ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರುಗಳಾದ ಲಕ್ಷ್ಮೀ ಹೆಬ್ಬಾಳಕರ್, ಅಂಜಲಿ ನಿಂಬಾಳಕರ್, ಮಹಾಂತೇಶ ಕೌಜಲಗಿ, ಗಣೇಶ ಹುಕ್ಕೇರಿ,ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಕಾಂಗ್ರೆಸ್ ರಾಷ್ಟ್ರ ಮತ್ತು ರಾಜ್ಯ ಪದಾಧಿಕಾರಿಗಳು, ಜಿಲ್ಲೆಯ ಮಾಜಿ ಸಚಿವರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ ೧೧ ಗಂಟೆಗೆ ಕ್ಯಾಂಪ್ ಹನುಮಾನ್ ಪುತ್ಥಳಿಯಿಂದ (ಬೋಗಾರ್ವೆಸ್ ಹತ್ತಿರ) ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು ಕಾಲೇಜ್ ರಸ್ತೆಯ ಮೂಲಕ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೃಣಾಲ್ ಹೆಬ್ಬಾಳಕರ್ ತಿಳಿಸಿದ್ದಾರೆ.