ಬೆಳಗಾವಿ: ಪೆಟ್ರೋಲ್, ಡಿಸೇಲ್, ಅಡುಗೆ ಅನೀಲ್ ಸೇರಿಂದಂತೆ ದಿನನಿತ್ಯ ಬಳಕೆಯ ಸಾಮಗ್ರಿಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಬಿಜೆಪಿಯು ಬಡವರನ್ನು ಕಿತ್ತು ತಿನ್ನುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ಶನಿವಾರ ನಗರ ಚೆನ್ನಮ್ಮ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರಕಾರವು ದಿನ ಬಳಕೆಯ ಸಾಮಗ್ರಿಗಳ ಬೆಲೆಯನ್ನು ದಿನದಿಂದ ದಿನಕ್ಕೆ ಏರಿಸುತ್ತಲೇ ಇದ್ದು ಬಡ ವರ್ಗದವರು ಮತ್ತು ಮದ್ಯಮ ವರ್ಗದ ಜನರ ಜೀವನ ಅದೋಗತಿಗೆ ತಲಪುತ್ತಿದೆ. ಅಡುಗೆ ಎಣ್ಣೆ, ಪೆಟ್ರೋಲ್, ಡಿಸೇಲ್ ಬಳೆ ಆಕಾಶ ಮುಟ್ಟಿದ್ದು ಸರಕಾರವು ಅಭಿವೃದ್ಧಿ ಮಾಡದೆ ಬಡವರನ್ನು ಕಿತ್ತು ತಿನ್ನುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲೆ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್ ಕಾಂಬ್ಳೆ ಹಾಗೂ ಕಾಂಗ್ರೆಸ್ ಯುವ ಘಟಕದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.