ಕೊಪ್ಪಳ ಆಗಸ್ಟ್ ೧೪ : ಕೊಪ್ಪಳ ಜಿಲ್ಲಾ ಪಂಚಾಯತ್ ಕಚೇರಿ ಕಟ್ಟಡ ಮತ್ತು ನಿರ್ವಹಣೆ ಯೋಜನೆಯಡಿಯಲ್ಲಿ ಅಧಿಕಾರಿಗಳು, ಸಿಬ್ಬಂದಿಯ ವಸತಿ ಗೃಹಗಳ ಕಟ್ಟಡ ಉದ್ಘಾಟನಾ ಸಮಾರಂಭ ಆಗಸ್ಟ್ ೧೫ರ ಬೆಳಿಗ್ಗೆ ೧೧ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ªರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ವಸತಿ ಗೃಹಗಳ ಕಟ್ಟಡದ ಉದ್ಘಾಟನೆ ನೆರವೇರಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ.ಬಿಟಿ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಪಂ.ರಾಜ್) ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾ ಮಹಾದೇವನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್, ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್, ಕರ್ನಾಟಕ ಪಂಚಾಯತ್ ಆಯುಕ್ತಾಲಯದ ಆಯುಕ್ತರಾದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ ಅವರು ಭಾಗವಹಿಸುವರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಪಂ ಉಪಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ, ಜಿಪಂ ಮುಖ್ಯ ಯೋಜನಾಧಿಕಾರಿಗಳಾದ ಡಿ.ಮಂಜುನಾಥ, ಜಿಪಂ ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ಜಿಪಂ ಮುಖ್ಯ ಲೆಕ್ಕಾಧಿಕಾರಿಗಳಾದ ಅಮೀನಸಾಬ ಅತ್ತಾರ್ ಉಪಸ್ಥಿತರಿರುವರು ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.